ರಾಜ್ಯದಲ್ಲಿ ನೂತನ ಸರಕಾರ ಅಧಿಕಾರಕ್ಕೆ ಬಂದ ಬಳಿಕ ದ.ಕ ಜಿಲ್ಲಾಡಳಿತದ ಆಡಳಿತ ವ್ಯವಸ್ಥೆ ಯಲ್ಲಿ ಶಾಸಕರ ಹಕ್ಕಿಗೆ ಚ್ಯುತಿಯಾಗುತ್ತಿದೆ: ಪ್ರತಾಪ್ ಸಿಂಹ ನಾಯಕ್
ಬೆಳ್ತಂಗಡಿ: ರಾಜ್ಯದಲ್ಲಿ ನೂತನ ಸರಕಾರ ಅಧಿಕಾರಕ್ಕೆ ಬಂದ ಬಳಿಕ ದ.ಕ ಜಿಲ್ಲಾಡಳಿತದ ಆಡಳಿತ ವ್ಯವಸ್ಥೆಯಲ್ಲಿ ವಿನಾಕಾರ ಹಸ್ತಕ್ಷೇಪ ಮಾಡುತ್ತಿರುವುದರಿಂದ ಶಾಸಕರ ಹಕ್ಕಿನ ಚ್ಯುತಿಯಾಗುತ್ತಿದೆ ಎಂದು ವಿಧಾನ ಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ್ ತಿಳಿಸಿದರು.
ಅವರು ಬೆಳ್ತಂಗಡಿ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಇರ್ವತ್ತೂರು ಗ್ರಾ.ಪಂ ಸ್ವಚ್ಛ ಸಂಕೀರ್ಣ ಘಟಕ ಲೋಕಾರ್ಪಣೆ ಕಾರ್ಯಕ್ರಮ ಮವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ರವರ ಅಧ್ಯಕ್ಷತೆಯಲ್ಲಿ ನಿಗದಿ ಪಡಿಸಿ ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಿಸಿ ಕಾರ್ಯಕ್ರಮದ ಹಿಂದಿನ ದಿನ ಏಕಾಏಕಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಆಹ್ವಾನ ಪತ್ರಿಕೆಯಲ್ಲಿ ಶಿಷ್ಟಾಚಾರದ ಉಲ್ಲಂಘನೆಯ ಕಾರಣ ನೀಡಿ ಕಾರ್ಯಕ್ರಮವನ್ನು ಸ್ಥಳೀಯ ಶಾಸಕರ ಗಮನಕ್ಕೆ ತಾರದೆ ರದ್ದು ಪಡಿಸಿದ್ದಾರೆ. ಈ ಬಗ್ಗೆ ವಿವರಣೆ ಕೇಳಿದಾಗ ಮೇಲಾಧಿಕಾರಿಗಳ ಸೂಚನೆ ಎಂಬ ಹಾರಿಕೆಯ ಉತ್ತರ ನೀಡುವ ಮೂಲಕ ಶಾಸಕರ ಹಕ್ಕು ಚ್ಯುತಿಯಾಗಿದೆ.
ದ.ಕ ಜಿಲ್ಲೆಯಲ್ಲಿ ಈ ರೀತಿ ಶಾಸಕರ ಚ್ಯುತಿ ತರುವ ಘಟನೆಗಳು ಮೇಲಾಧಿಕಾರಿಗಳ ಮೌಖಿಕ ಆದೇಶ ಮೇರೆಗೆ ನಡೆಯುತ್ತಿದ್ದು, ಅಧಿಕಾರಿಗಳ ಈ ರೀತಿಯ ವರ್ತನೆ ಖಂಡನೀಯ. ಈಗಾಗಲೇ ಅಮಾನತುಗೊಂಡಿರುವ ಅಧಿಕಾರಿಗಳ ಅಮಾನತು ಆದೇಶವನ್ನು ತಕ್ಷಣ ಹಿಂಪಡೆಯಬೇಕು ಮತ್ತು ಶಾಸಕರಹಕ್ಕಿಗೆ ಚ್ಯುತಿ ತರುವ ಕೆಲಸ ಮುಂದಕ್ಕೆ ಮರುಕಳಿಸದಂತೆ ಹಾಗೂ ವಿರೋಧ ಪಕ್ಷದ ಶಾಸಕರನ್ನು ಅಧಿಕಾರಿಗಳ ಮೂಲಕ ದಮನಿಸುವ ಕಾರ್ಯದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಕೋರಲಾಯಿತು.
ಕ್ರಮ ಕೈಗೊಳ್ಳದೇ ಇದ್ದರೆ ದ.ಕ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ದ.ಕ ಜಿಲ್ಲೆಯ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರುಗಳಾದ ನಾವು ಧರಣಿ ಪ್ರತಿಭಟನೆ ನಡೆಸಲು ತೀರ್ಮಾನಿಸಿರುವುದಾಗಿ ಆಗ್ರಹಿಸಿದರು
ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ನಾವೂರು ಉಪಸ್ಥಿತರಿದ್ದರು.