• June 16, 2024

ವಸತಿ ಸಚಿವ ಸೋಮಣ್ಣರಿಂದ 1640 ಮಂದಿ ಅರ್ಹ ಫಲಾನುಭವಿಗಳಿಗೆ ಮನೆ ನಿರ್ಮಾಣ ಕಾಮಗಾರಿ ಆದೇಶ ಪತ್ರ ವಿತರಣೆ

 ವಸತಿ ಸಚಿವ ಸೋಮಣ್ಣರಿಂದ 1640 ಮಂದಿ ಅರ್ಹ ಫಲಾನುಭವಿಗಳಿಗೆ ಮನೆ ನಿರ್ಮಾಣ ಕಾಮಗಾರಿ ಆದೇಶ ಪತ್ರ ವಿತರಣೆ

ಬೆಳ್ತಂಗಡಿ: ರಾಜೀವ‌ ಗಾಂಧಿ ವಸತಿ ನಿಗಮ ಬೆಂಗಳೂರು, ದ.ಕ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕಿನ 2021- 22ನೇ ಸಾಲಿನ ಬಸವ ವಸತಿ ಹಾಗೂ ಡಾ. ಬಿ.ಆರ್ ಅಂಬೇಡ್ಕರ್ ವಸತಿ ಯೋಜನೆಯಲ್ಲಿ 48 ಗ್ರಾಮ ಪಂಚಾಯತ್ ಗಳು 1640 ಮಂದಿ ಅಹ೯ ಫಲಾನುಭವಿಗಳಿಗೆ ಮನೆ ನಿರ್ಮಾಣ ಕಾಮಗಾರಿ ಆದೇಶ ಪತ್ರ ವಿತರಣಾ ಕಾರ್ಯಕ್ರಮ ಆ.27ರಂದು ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಭವನ ಗುರುವಾಯನಕೆರೆಯಲ್ಲಿ ಜರುಗಿತು.

ರಾಜ್ಯ ಸರ್ಕಾರದ ವಸತಿ ಸಚಿವ ವಿ. ಸೋಮಣ್ಣ ಅವರು ಕಾಯ೯ಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ, ಸಾಂಕೇತಿಕವಾಗಿ ಫಲಾನುಭವಿಗಳಿಗೆ ಆದೇಶ ಪತ್ರ ವಿತರಿಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಹರೀಶ್ ಪೂಂಜ ಅವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್, ನ.ಪಂ. ಅಧ್ಯಕ್ಷ ರಜನಿ ಕುಡ್ವ, ಉಪಾಧ್ಯಕ್ಷ ಜಯಾನಂದ ಗೌಡ, ಜಿ.ಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕುಮಾರ್, ರಾಜೀವ ಗಾಂಧಿ ವಸತಿ ನಿಗಮದ ವ್ಯವಸ್ಥಾಪಕ ಅರುಣ್ ಕುಮಾರ್, ಜಿ.ಪಂ ಯೋಜನಾ ನಿರ್ದೇಶಕ ಹೆಚ್. ಆರ್. ನಾಯಕ್, ತಹಶೀಲ್ದಾರ್ ಪೃಥ್ವಿ ಸಾನಿಕ್, ತಾ.ಪಂ ಕಾಯ೯ನಿವ೯ಣಾಧಾಕಾರಿ ಕುಸುಮಾಧರ್ ಭಾಗವಹಿಸಿದ್ದರು.

ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರುಗಳು ಉಪಸ್ಥಿತರಿದ್ದರು. ಕಾಯ೯ಕ್ರಮದಲ್ಲಿ 1640 ಫಲಾನುಭವಿಗಳು ಭಾಗಿಯಾಗಿದ್ದರು.

Related post

Leave a Reply

Your email address will not be published. Required fields are marked *

error: Content is protected !!