• June 16, 2024

ಶ್ರೀ. ಧ.ಮ.ಆ.ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

 ಶ್ರೀ. ಧ.ಮ.ಆ.ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ


ಶ್ರಿ.ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಅತ್ಯಂತ ಸಂಭ್ರಮದಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿಯಾಗಿರುವ ಶ್ರೀಯುತ ವೀರೂಶೆಟ್ಟಿಯವರು ಧ್ವಜಾರೋಹಣವನ್ನು ಮಾಡಿದರು.

ವಿದ್ಯಾರ್ಥಿಗಳು ರಾಷ್ಟ್ರಗೀತೆ ಧ್ವಜ ಗೀತೆ ಹಾಗೂ ವಂದೇ ಮಾತರಂ ಗೀತೆಯೊಂದಿಗೆ ಧ್ವಜಕ್ಕೆ ಗೌರವವನ್ನು ಸಲ್ಲಿಸಿದರು. ಬಳಿಕ ವಿದ್ಯಾರ್ಥಿಗಳು ಉಳುವ ಯೋಗಿಯ ನೋಡಲ್ಲಿ ಎಂಬ ಪ್ರಾರ್ಥನಾ ಗೀತೆಯೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಾರಂಭಿಸಿದರು.

ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಪ್ರಾಸ್ತಾವಿಕ ಮಾತನಾಡಿ ಸ್ವಾತಂತ್ರ್ಯ ದಿನಾಚಣೆಯ ಮಹತ್ವ ವಿವರಿಸಿ ಎಲ್ಲರನ್ನೂ ಸ್ವಾಗತಿಸಿದರು. ಈ ಕಾರ್ಯಕ್ರಮದಲ್ಲಿ ಪ್ರಾಣ ಪ್ರಮಾಣವಚನವನ್ನು ಸ್ವೀಕರಿಸಲಾಯಿತು.

ಕಾರ್ಯಕ್ರಮದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ನಡೆದ ವಿವಿಧ ಸ್ಪರ್ಧೆಗಳಿಗೆ ಮುಖ್ಯ ಅತಿಥಿಗಳು ಬಹುಮಾನವನ್ನು ನೀಡಿ ಪ್ರೋತ್ಸಾಹಿಸಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿರುವ ಶ್ರೀಯುತ ವೀರೂ ಶೆಟ್ಟಿಯವರು ಘರ್ ಘರ್ ಮೇ ತಿರಂಗಾದ ಕುರಿತು ಧ್ವಜ ಹಾಗೂ ಅದರ ಮಹತ್ವ, ಸ್ವಾತಂತ್ರ್ಯದ ಮಹತ್ವ, ಸ್ವಾತಂತ್ರ್ಯ ದೊರಕಿದ ತ್ಯಾಗಿಗಳ ತ್ಯಾಗ ಅದನ್ನು ಉಳಿಸಲು ಈಗಲೂ ಶ್ರಮವಹಿಸಿ ದುಡಿಯುತ್ತಿರುವ ಗಂಡೆದೆಯ
ವೀರರ ಶ್ರಮ ಇತ್ಯಾದಿಗಳನ್ನು ಬಹಳ ಸುಂದರವಾಗಿ ವಿವರಿಸಿದರು.

ತದನಂತರ ವಿದ್ಯಾರ್ಥಿಗಳು ಹಾಡು ನೃತ್ಯ ಭಾಷಣಗಳ ಮುಖಾಂತರ ದೇಶಭಕ್ತಿಯನ್ನು ಬಿಂಬಿಸುವ ಬೆಳೆಸುವ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಿದರು.

ವಿದ್ಯಾರ್ಥಿನಿ ಕು.ಸ್ಮೃತಿ ನಿರೂಪಿಸಿದ ಕಾರ್ಯಕ್ರಮದಲ್ಲಿ ಕುಮಾರಿ ಅಂಜನಾ ಅತಿಥಿಗಳ ಕಿರು ಪರಿಚಯವನ್ನು ನೀಡಿ ಕು.ರುಕ್ಷಾಲಿ ವಂದಿಸಿದರು.ಶಾಲಾ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

Related post

Leave a Reply

Your email address will not be published. Required fields are marked *

error: Content is protected !!