• September 8, 2024

ಬಂದಾರು ಗ್ರಾಮ ಪಂಚಾಯತ್ ನಲ್ಲಿ 77 ನೇ ಸಂಭ್ರಮದ ಸ್ವಾತಂತ್ರ್ಯೋತ್ಸವ ದಿನಾಚರಣೆ

 ಬಂದಾರು ಗ್ರಾಮ ಪಂಚಾಯತ್ ನಲ್ಲಿ 77 ನೇ ಸಂಭ್ರಮದ ಸ್ವಾತಂತ್ರ್ಯೋತ್ಸವ ದಿನಾಚರಣೆ

ಬಂದಾರು: ಬಂದಾರು ಗ್ರಾಮ ಪಂಚಾಯತ್ ನಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ ಇವರು 77 ನೆ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿ ಪಂಚಾಯತ್ ನ ಸಮಗ್ರ ಅಭಿವೃದ್ದಿಗೆ ಸಾರ್ವಜನಿಕರ ಸಹಕಾರ ಬಯಸುತ್ತಾ ,ಸಮಸ್ತರಿಗೂ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಉಪಾಧ್ಯಕ್ಷೆ ಶ್ರೀಮತಿ ಪುಷ್ಪಾವತಿ ಬರಮೇಲು, ಬಂದಾರು ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷರಾದ ಶ್ರೀಮತಿ ಪರಮೇಶ್ವರಿ ಕೆ ಗೌಡ,ಮಾಜಿ ಅಧ್ಯಕ್ಷರಾದ ಉದಯ ಕುಮಾರ್ ಬಿ.ಕೆ ವಕೀಲರು,ಅಬ್ಬಾಸ್ ಬಟ್ಲಡ್ಕ, ನಿಕಟಪೂರ್ವ ಉಪಾಧ್ಯಕ್ಷರಾದ ಗಂಗಾಧರ ಪೂಜಾರಿ ಮುಗೆರಡ್ಕ ಉಪಸ್ಥಿತರಿದ್ದರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀ ಮೋಹನ್ ಬಂಗೇರ ಕಾರ್ಯಕ್ರಮ ನಡೆಸಿಕೊಟ್ಟರು.


ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಬಾಲಕೃಷ್ಣ ಗೌಡ ಮುಗೆರಡ್ಕ,ಶಿವ ಗೌಡ ಹೇವ, ಮೋಹನ ಗೌಡ, ಶ್ರೀಮತಿ ಸುಚಿತ್ರ, ಶ್ರೀಮತಿ ಅನಿತಾ, ಶ್ರೀಮತಿ ಭಾರತಿ ಉಪಸ್ಥಿತರಿದ್ದರು. ಸಿಬ್ಬಂದಿಗಳಾದ ದಿನಕರ , ಪ್ರವೀಣ್ ,ಮೋಹನ ಬಂಗೇರ, ಶ್ರೀಮತಿ ಶಾಂತಿ, ಶ್ರೀಮತಿ ಸರೋಜಿನಿ, ಸುಪ್ರೀತಾ ಸಹಕರಿಸಿದರು.


ಈ ಸಂದರ್ಭದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಶಿಲಾ ಫಲಕವನ್ನು ಅನಾವರಣಗೊಳಿಸಲಾಯಿತು ಅಮೃತ ಮಹೋತ್ಸವದ ನೆನಪಿಗಾಗಿ 75 ಗಿಡಗಳ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು ನಮ್ಮ ಮಣ್ಣು ನಮ್ಮ ದೇಶ ಎಂಬ ಧ್ಯೆಯವಾಕ್ಯದಂತೆ ಮಣ್ಣನ್ನು ಸಂಗ್ರಹಿಸಲಾಯಿತು.


ಪಂಚಾಯತ್ ವತಿಯಿಂದ
ಬಂದಾರು-ಮೊಗ್ರು ಗ್ರಾಮ ವ್ಯಾಪ್ತಿಯ ಎಲ್ಲಾ ಎಲ್ಲಾ ಅಂಗನವಾಡಿ, ಪ್ರಾಥಮಿಕ ಶಾಲೆ,ಪ್ರೌಢಶಾಲೆ ಯ ವಿಧ್ಯಾರ್ಥಿಗಳಿಗೆ ಸಿಹಿತಿಂಡಿ ವಿತರಿಸಲಾಯಿತು.

Related post

Leave a Reply

Your email address will not be published. Required fields are marked *

error: Content is protected !!