• July 16, 2024

ಸೌಜನ್ಯ ಕೊಲೆ ಪ್ರಕರಣ: ವಿಶೇಷ ತನಿಖಾ ತಂಡದ ಮುಖಾಂತರ ಆರೋಪಿಗಳನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆಗೆ ಒತ್ತಾಯಿಸುವಂತೆ ಸೆ.3 ರಂದು ಬೃಹತ್ ಪ್ರತಿಭಟನಾ ಸಭೆ: ಮಹೇಶ್ ಶೆಟ್ಟಿ ತಿಮರೋಡಿ

 ಸೌಜನ್ಯ ಕೊಲೆ ಪ್ರಕರಣ: ವಿಶೇಷ ತನಿಖಾ ತಂಡದ ಮುಖಾಂತರ ಆರೋಪಿಗಳನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆಗೆ ಒತ್ತಾಯಿಸುವಂತೆ ಸೆ.3 ರಂದು ಬೃಹತ್ ಪ್ರತಿಭಟನಾ ಸಭೆ: ಮಹೇಶ್ ಶೆಟ್ಟಿ ತಿಮರೋಡಿ

ಬೆಳ್ತಂಗಡಿ: ಸೌಜನ್ಯ ಅತ್ಯಾಚಾರ & ಕೊಲೆ ಪ್ರಕರಣ ನಡೆದು ಸುಮಾರು 11 ವರ್ಷ ಕಳೆದರೂ ಕೂಡ ಆಕೆಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದ ನಿಜ ಆರೋಪಿಗಳನ್ನು ಪತ್ತೆ ಹಚ್ಚಿ ಕಾನೂನಿನ ಅಡಿಯಲ್ಲಿ ಕಠಿಣ ಶಿಕ್ಷೆ ನೀಡಲು ಸಂಬಂಧ ಪಟ್ಟ ಇಲಾಖೆ ಸಂಪೂರ್ಣ ವಿಫಲವಾಗಿದೆ. ನಿಜವಾದ ಆರೋಪಿಗಳನ್ನು ಪತ್ತೆ ಮಾಡಿ ತಪ್ಪಿತಸ್ಥರಿಗೆ ಕಾನೂನಿನ ಅಡಿಯಲ್ಲಿ ಕಠಿಣ ಕ್ರಮ ಜರುಗಿಸಲು ನ್ಯಾಯಾಂಗದ ಸುಪರ್ಧಿಯಲ್ಲಿ ವಿಶೇಷ ತನಿಖಾ ತಂಡದ ಮುಖಾಂತರ ತನಿಖೆ ನಡೆಸಿ ಸೌಜನ್ಯ ಅತ್ಯಾಚಾರ ಕೊಲೆ ಮಾಡಿದ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಒತ್ತಾಯಿಸಿ ಸಪ್ಟೆಂಬರ್ 3 ರಂದು ಆದಿತ್ಯವಾರ 10 ಗಂಟೆಗೆ ಸರಿಯಾಗಿ ಬೃಹತ್ ಪ್ರತಿಭಟನಾ ಸಭೆಯನ್ನು ಬೆಳ್ತಂಗಡಿ ತಾಲೂಕಿನ ತಾಲೂಕು ಮೈದಾನದಲ್ಲಿ ನಡೆಸಲು ಉದ್ದೇಶಿಸಲಾಗಿದೆ ಎಂದು ಮಹೇಶ್ ಶೆಟ್ಟಿ ತಿಮರೋಡಿಯವರು ತಿಳಿಸಿದರು.

ಅವರು ನಾರಾಯಣ ಗುರು ಸಭಾಭವನದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು

ಈ ಸಂದರ್ಭದಲ್ಲಿ ಪ್ರಜಾಪ್ರಭುತ್ವ ವೇದಿಕೆ ಕಾರ್ಯದರ್ಶಿ ಅನಿಲ್ ಕುಮಾರ್, ಮನೋಜ್ ಕುಂಜರ್ಪ, ತಾಲೂಕು ಅಧ್ಯಕ್ಷರು, ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ , ಹರೀಶ್, ಗೌರವ ಅಧ್ಯಕ್ಷರು, ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ,
ಪ್ರಜ್ವಲ್ ಕೆ ವಿ ಗೌಡ ಉಪಸ್ಥಿತರಿದ್ದರು.

Related post

Leave a Reply

Your email address will not be published. Required fields are marked *

error: Content is protected !!