• September 13, 2024

ಸೌಜನ್ಯ ಪ್ರಕರಣ: ನೈಜ ಆರೋಪಿಗಳಿಗೆ ಶಿಕ್ಷೆಯಾಗುವಂತೆ ಮತ್ತು ಶ್ರೀ. ಕ್ಷೇತ್ರ ಧರ್ಮಸ್ಥಳಕ್ಕೆ ಅವಮಾನವಾಗದಂತೆ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದ ಪಜಿರಡ್ಕದಲ್ಲಿ ಪ್ರಾರ್ಥನೆ

 ಸೌಜನ್ಯ ಪ್ರಕರಣ: ನೈಜ ಆರೋಪಿಗಳಿಗೆ ಶಿಕ್ಷೆಯಾಗುವಂತೆ ಮತ್ತು ಶ್ರೀ. ಕ್ಷೇತ್ರ ಧರ್ಮಸ್ಥಳಕ್ಕೆ ಅವಮಾನವಾಗದಂತೆ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದ ಪಜಿರಡ್ಕದಲ್ಲಿ ಪ್ರಾರ್ಥನೆ

ಪಜಿರಡ್ಕ: ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರ ಪಜಿರಡ್ಕ ದೇವಸ್ಥಾನದಲ್ಲಿ, ಸೌಜನ್ಯಳನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದ ನೈಜ ಆರೋಪಿಗಳಿಗೆ ಶಿಕ್ಷೆ ಆಗಬೇಕು ಮತ್ತು ಹಿಂದೂಗಳ ಧಾರ್ಮಿಕ ಶ್ರದ್ದಾಕೇಂದ್ರವಾದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮತ್ತು ಪೂಜ್ಯ ಖಾವಂದರ ಬಗ್ಗೆ ಅವಹೇಳನ ಮಾಡದಂತೆ ಅವರಿಗೆ ಒಳ್ಳೆಯ ಬುದ್ದಿಯನ್ನು ಕೊಡಲಿ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಸಂಘದಿಂದ ಪೂಜೆ ಮಾಡಿ ಪ್ರಾರ್ಥನೆ ಮಾಡಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಕೃಷ್ಣಪ್ಪ ಗುಡಿಗಾರ್, ಸಮಿತಿ ಕಾರ್ಯದರ್ಶಿ ತುಕಾರಾಮ ಸರ್, ಸಮಿತಿ ಸದಸ್ಯರು ಮತ್ತು ಒಕ್ಕೂಟದ ವಲಯ ಅಧ್ಯಕ್ಷರು, ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು , ದೇವಸ್ಥಾನದ ಪ್ರದಾನ ಅರ್ಚಕರು, ಉಜಿರೆ ವಲಯ, ಧರ್ಮಸ್ಥಳ ವಲಯ ಮೇಲ್ವಿಚಾರಕರು ಒಕ್ಕೂಟದ ಎಲ್ಲಾ ಪದಾಧಿಕಾರಿಗಳು, ಗಣ್ಯರು, ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.

Related post

Leave a Reply

Your email address will not be published. Required fields are marked *

error: Content is protected !!