• November 22, 2024

ಬದನಾಜೆ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

 ಬದನಾಜೆ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

 

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು, ತಾಲೂಕು ಜನಜಾಗೃತಿ ವೇದಿಕೆ ಬೆಳ್ತಂಗಡಿ, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಉಜಿರೆ ವಲಯ,ಮತ್ತು ಸರಕಾರಿ ಪ್ರೌಢ ಶಾಲೆ ಬದನಾಜೆ ಇವರುಗಳು ಸಂಯುಕ್ತ ಆಶ್ರಯದಲ್ಲಿ ಪರಮಪೂಜ್ಯ ರಾಜರ್ಷಿ ಡಾll ಡಿ.ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಡಾll ಹೇಮಾವತಿ ವಿ.ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ ವಿದ್ಯಾರ್ಥಿಗಳಿಗೆ ” ಸ್ವಾಸ್ಥ್ಯ ಸಂಕಲ್ಪ ” ಕಾರ್ಯಕ್ರಮ ನಡೆಯಿತು.

ವಲಯದ ಅಧ್ಯಕ್ಷರಾದ ಉಮ್ಮಾರಬ್ಬ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಶಿಬಿರಾಧಿಕಾರಿ ಶ್ರೀ ನಂದಕುಮಾರ್ ಪಿ ಪಿ ಇವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ, ಮಾದಕ ವ್ಯಸನವೆಂಬುದೊಂದು ರೋಗ. ವಿದ್ಯಾರ್ಥಿಗಳ ವಯಸ್ಸು ಹದಿಹರೆಯದ ವಯಸ್ಸು. ಹದಿಹರೆಯದಲ್ಲಿನ ಒತ್ತಡಗಳು, ತಂದೆ – ತಾಯಂದಿರ ಒತ್ತಡ, ಸ್ನೇಹಿತರ ಒತ್ತಡ, ಜೀವನ ಶೈಲಿ, ಮಾಧ್ಯಮ, ಆರ್ಥಿಕ ಸ್ವಾತಂತ್ರ್ಯ, ಪ್ರೀತಿಯ ಕೊರತೆ, ಅನಾರೋಗ್ಯ, ಪಾಶ್ಚಾತ್ಯ ಸಂಸ್ಕೃತಿ, ಸಾಹಸ ಪ್ರವೃತ್ತಿ, ನಕಾರಾತ್ಮಕ ಚಿಂತನೆಗಳು, ಈ ಎಲ್ಲಾ ಕಾರಣಗಳಿಂದಾಗಿ ಅಮಲು ಪದಾರ್ಥ ಹಾಗೂ ಇನ್ನಿತರ ವ್ಯಸನಗಳಿಗೆ ಬಲಿಯಾಗುವ ಸಾಧ್ಯತೆಗಳಿವೆ.
ಸಮಾಜದಲ್ಲಿ ವ್ಯಸನಕ್ಕೆ ಬಲಿ ಬಿದ್ದವರಿಗೆ ಅಪಘಾತ, ಆತ್ಮಹತ್ಯೆ ಮತ್ತು ಅಕಾಲಿಕ ಮರಣ ಇವುಗಳು ಸರ್ವೇ ಸಾಮಾನ್ಯ. ಇವುಗಳಿಂದ ಹೊರಬರಲು ವಿದ್ಯಾರ್ಥಿಗಳಾದ ನಾವು ತಮ್ಮ ಜೀವನದಲ್ಲಿ ಎಚ್ಚೆತ್ತುಕೊಳ್ಳುವ ಅವಶ್ಯಕತೆಯಿದೆ. ದೃಢ ನಿರ್ಧಾರ, ಸಂಧಾನ ಕೌಶಲ, ರಚನಾತ್ಮಕ ಚಿಂತನೆ, ವಿಮರ್ಶಾತ್ಮಕ ಚಿಂತನೆ ಸಂವಹನ ಕುಶಲತೆ ವ್ಯಕ್ತಿ – ವ್ಯಕ್ತಿ ಸಂಬಂಧ, ಸಮಯ ಪಾಲನೆ, ನಡತೆ, ಗೌರವ, ಆತ್ಮಸ್ಥೈರ್ಯ, ಸಮಸ್ಯಾ ಪರಿಹಾರ, ಪರಾನುಭೂತಿ, ದೃಢ ನಿಲುವು, ಭಾವ ನಿಯಂತ್ರಣ, ಧನಾತ್ಮಕ ಚಿಂತನೆ, ಕರ್ತವ್ಯ ಪ್ರಜ್ಞೆ, ಮತ್ತು ಪ್ರೀತಿ ವಿಶ್ವಾಸಗಳಿಂದ ಮಾತ್ರ ವ್ಯಸನ ಮುಕ್ತ ಜೀವನವನ್ನು ನಡೆಸಲು ಸಾಧ್ಯ. ಆರೋಗ್ಯಪೂರ್ಣ ವ್ಯಕ್ತಿಗಳನ್ನು ಸಮಾಜಕ್ಕೆ ಕೊಡುವಲ್ಲಿ ನಮ್ಮೆಲ್ಲರ ಪಾತ್ರವಿದೆ. ಬಹುತೇಕ ಯುವಜನತೆ ಬಾಹ್ಯ ವ್ಯಕ್ತಿಗಳ ಪ್ರಭಾವದಿಂದ ದುಶ್ಚಟಗಳಿಗೆ ದಾಸರಾಗುತ್ತಿದ್ದು, ಇದನ್ನು ತಡೆಗಟ್ಟಲು ಸಂಕಲ್ಪ ಮಾಡೋಣ ಎಂದು ಪ್ರತಿಜ್ಞಾ ವಿಧಿ ಭೋದಿಸಿದರು.

ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ಜಮುನಾ ಇವರು ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ವಹಿಸಿ ಅಧ್ಯಕ್ಷೀಯ ಮಾತುಗಳೊಂದಿಗೆ ವಿದ್ಯಾರ್ಥಿಗಳಿಗೆ ಶುಭವನ್ನು ಹಾರೈಸಿದರು.

ಕಾರ್ಯಕ್ರಮದ ವೇದಿಕೆಯಲ್ಲಿ ಉಮಾರಬ್ಬ ವಲಯಾಧ್ಯಕ್ಷರು ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಉಜಿರೆ ವಲಯ ಶ್ರೀ ಬಾಬು ನಾಯ್ಕ್ ಅಧ್ಯಕ್ಷರು ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಬದನಾಜೆ ಇವರುಗಳು ಉಪಸ್ಥಿತರಿದ್ದರು.

ಸಂಸ್ಥೆಯ ಶಿಕ್ಷಕ ವೃಂದದವರು, ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು
128 ವಿದ್ಯಾರ್ಥಿಗಳು ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಂಡರು.ವಲಯ ಮೇಲ್ವಿಚಾರಕರು ಶ್ರೀಮತಿ ವನಿತಾ, ಸೇವಾಪ್ರತಿನಿಧಿ ಹೇಮಾ ಹಾಜರಾಗಿದ್ದರು ಶಾಲೆಯ ವಿದ್ಯಾರ್ಥಿನಿಯರು ಪ್ರಾರ್ಥಿಸಿ, ಕಾರ್ಯಕ್ರಮ ಸಂಪೂರ್ಣ ಜವಾಬ್ದಾರಿಯನ್ನು ನಿರ್ವಹಿಸಿದ್ದರು .

Related post

Leave a Reply

Your email address will not be published. Required fields are marked *

error: Content is protected !!