• November 13, 2024

ಅಪಘಾತದಿಂದ ಮೃತಪಟ್ಟ ಆಂಬ್ಯುಲೆನ್ಸ್ ಚಾಲಕ ಶಬೀರ್ ಮಾಲಾಡಿ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರಕ್ಕೆ SDPI ಆಗ್ರಹ

 ಅಪಘಾತದಿಂದ ಮೃತಪಟ್ಟ ಆಂಬ್ಯುಲೆನ್ಸ್ ಚಾಲಕ ಶಬೀರ್ ಮಾಲಾಡಿ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರಕ್ಕೆ SDPI ಆಗ್ರಹ

 

ಬೆಳ್ತಂಗಡಿ (ಆಗಸ್ಟ್-19): ಆಗಸ್ಟ್ 18 ರಂದು ಬೆಳ್ತಂಗಡಿ ತಾಲೂಕು ಮಾಲಾಡಿ ನಿವಾಸಿ ಆಂಬ್ಯುಲೆನ್ಸ್ ಚಾಲಕ ಶಬೀರ್ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟಿದ್ದು ಅವರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ನೀಡಬೇಕೆಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಕಾರ್ಯದರ್ಶಿ ಅಶ್ಫಾಕ್ ಪುಂಜಾಲಕಟ್ಟೆ ಆಗ್ರಹಿಸಿದ್ದಾರೆ.

     ಮಂಗಳೂರು ಆಸ್ಪತ್ರೆಗೆ ರೋಗಿಯೊಬ್ಬರನ್ನು ಕರೆದೊಯ್ಯುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ವಗ್ಗ ಬಳಿ ಆಂಬ್ಯುಲೆನ್ಸ್ ಪಲ್ಟಿಯಾಗಿದ್ದು ಈ ಸಂದರ್ಭದಲ್ಲಿ ಚಾಲಕರಾಗಿದ್ದ ಶಬೀರ್ ಮಾಲಾಡಿ ಅಪಘಾತದಲ್ಲಿ ಮೃತಪಟ್ಟಿರುತ್ತಾರೆ. ವೃತ್ತಿಯಲ್ಲಿ ಆಂಬ್ಯುಲೆನ್ಸ್ ಚಾಲಕರಾಗಿದ್ದ ಶಬೀರ್ ಮಾಲಾಡಿ ಅವರು ಸಾಮಾಜಿಕ ಸೇವೆಯಲ್ಲಿ ತನ್ನನ್ನು ತೊಡಗಿಸಿಕೊಂಡ ವ್ಯಕ್ತಿಯಾಗಿದ್ದಾರೆ. ಅನೇಕ ತುರ್ತು ಸಂದರ್ಭಗಳಲ್ಲಿ ತನ್ನ ಜೀವದ ಹಂಗು ತೊರೆದು ರೋಗಿಗಳಿಗೆ ಸೇವೆ ನೀಡುತ್ತಿದ್ದರು.  ಆಂಬ್ಯುಲೆನ್ಸ್ ಚಾಲಕ ವೃತ್ತಿ ನಂಬಿಕೊಂಡು ಜೀವನ ನಡೆಸುತ್ತಿದ್ದು, ಆದರೆ ಅಪಘಾತದ ಪರಿಣಾಮ ಆ ಕುಟುಂಬಗಳು ತೀವ್ರ ಸಂಕಷ್ಟಕ್ಕೆ ಒಳಗಾಗಿವೆ ಆದ್ದರಿಂದ ಕೂಡಲೇ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯನವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ತಾಲೂಕು ತಹಸೀಲ್ದಾರ್ ಮೂಲಕ ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಬೇಕೆಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಒತ್ತಾಯಿಸಿದ್ದಾರೆ.

Related post

Leave a Reply

Your email address will not be published. Required fields are marked *

error: Content is protected !!