• November 22, 2024

ಸೌಜನ್ಯ ಕೊಲೆ ಪ್ರಕರಣ: ನ್ಯಾಯಕ್ಕಾಗಿ ಆ.28 ರಂದು ಕರ್ನಾಟಕ ರಾಜ್ಯ ಜನಪರ ಸಂಘಟನೆಗಳ ವೇದಿಕೆ ದ.ಕ ಜಿಲ್ಲಾ ಸಮಿತಿ ನೇತೃತ್ವದಲ್ಲಿ ರಾಜ್ಯ ಮಟ್ಟದ ಚಲೋ ಬೆಳ್ತಂಗಡಿ ಮಹಾಧರಣಿ

 ಸೌಜನ್ಯ ಕೊಲೆ ಪ್ರಕರಣ: ನ್ಯಾಯಕ್ಕಾಗಿ ಆ.28 ರಂದು ಕರ್ನಾಟಕ ರಾಜ್ಯ ಜನಪರ ಸಂಘಟನೆಗಳ ವೇದಿಕೆ ದ.ಕ ಜಿಲ್ಲಾ ಸಮಿತಿ  ನೇತೃತ್ವದಲ್ಲಿ    ರಾಜ್ಯ ಮಟ್ಟದ ಚಲೋ ಬೆಳ್ತಂಗಡಿ ಮಹಾಧರಣಿ

 

ಬೆಳ್ತಂಗಡಿ: ಸೌಜನ್ಯ ಅತ್ಯಾಚಾರ & ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೈಜ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಸರಿಯಾದ ತನಿಖೆ ನಡೆಸಿಲ್ಲ ಎಂದು ರಾಜ್ಯದ ವಿವಿಧೆಡೆ ಹೋರಾಟಗಳು ನಡೆಯುತ್ತಿದೆ. ಇದರ ಭಾಗವಾಗಿ ನ್ಯಾಯಕ್ಕೆ ಒತ್ತಾಯಿಸಿ ಕರ್ನಾಟಕ ರಾಜ್ಯ ಜನಪರ ಸಂಘಟನೆಗಳ ವೇದಿಕೆ ದ.ಕ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಆ.28 ರಂದು ಬೆಳಗ್ಗೆ 10 ಗಂಟೆಯಿಂದ ರಾಜ್ಯ ಮಟ್ಟದ ಚಲೋ ಬೆಳ್ತಂಗಡಿ ಮಹಾಧರಣಿ ಕಾರ್ಯಕ್ರಮ ಜರುಗಲಿದೆ ಎಂದು ಮಾಜಿ ಶಾಸಕ ಕೆ ವಸಂತ ಬಂಗೇರ ತಿಳಿಸಿದರು.

ಅವರು ಆ.22 ರಂದು ನಾರಾಯಣ ಗುರು ಸಭಾಭವನದಲ್ಲಿ ಕರೆದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದರು.

ಕೆಲವರು ಸೌಜನ್ಯಳಿಗೆ ನ್ಯಾಯ ಸಿಗಬಾರದೆಂದು ಕೆಲವು ವಿರೋಧಿ ಶಕ್ತಿಗಳು ಆ.28 ರಂದು ಬೆಳ್ತಂಗಡಿ ಯಲ್ಲಿ ಧರಣಿ ಇಲ್ಲ ಎಂದು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ. ಆ.28 ರಂದು ರಾಜ್ಯಮಟ್ಟದ ಹೋರಾಟ ಬೆಳ್ತಂಗಡಿ ಯಲ್ಲಿ ಚಲೋ ಬೆಳ್ತಂಗಡಿ ನಡೆಯಲಿದೆ ಹಾಗೂ ತಾಲೂಕು ಕಚೇರಿ ಮುಂಭಾಗ ಮಹಾಧರಣಿ ನಡೆಯಲಿದೆ. ಸುಳ್ಳು ಸುದ್ದಿಗಳಿಗೆ ಸುಳ್ಳು ವದಂತಿಗಳಿಗೆ ಬಲಿಯಾಗದೆ ಸೌಜನ್ಯಳ ನ್ಯಾಯದ ನಿರೀಕ್ಷೆಯಲ್ಲಿರುವ ಎಲ್ಲಾ ಜನರು, ಕರ್ನಾಟಕ ರಾಜ್ಯದ ಜನಪರ ಸಂಘಟನೆಗಳು ಒಂದಾಗಿ ಈ ಧರಣಿ ನಡೆಸುವುದರಿಂದ ತಾಲೂಕಿನ ಜನಪರ ಸಂಘಟನೆಗಳು, ಸಮಾಜಸೇವಾ ಸಂಘಟನೆಗಳು, ಪ್ರಜ್ಞಾವಂತ ನಾಗರಿಕರು, ರೈತರು, ಕಾರ್ಮಿಕರು,ಶೋಷಿತರು, ದಲಿತರು, ಹಿಂದುಳಿದ ವರ್ಗದವರು, ಮಹಿಳೆಯರು ವಿದ್ಯಾರ್ಥಿ ಯುವಜನರ ದೊಡ್ಡ ಸಂಖ್ಯೆ ಯಲ್ಲಿ ಪಾಲ್ಗೊಳ್ಳುವಂತೆ ಸುದ್ದಿಗೋಷ್ಠಿಯಲ್ಲಿ ಕರೆ ವಸಂತ ಬಂಗೇರ ಇವರು ಕರೆ ನೀಡಿದರು.

ಸುದ್ದಿ ಗೋಷ್ಠಿಯಲ್ಲಿ ವಕೀಲರು ಹಾಗೂ ಕಾರ್ಮಿಕ ಮುಖಂಡರಾದ ಬಿ.ಎಂ ಭಟ್, ವಕೀಕರು ಮನೋಹರ್ , ತಣ್ಣೀರುಪಂತ ಗ್ರಾ.ಪಂ ಅಧ್ಯಕ್ಷರು ಜಯವಿಕ್ರಮ್ ಕಲ್ಲಾಪು ಉಪಸ್ಥಿತರಿದ್ದರು.

Related post

Leave a Reply

Your email address will not be published. Required fields are marked *

error: Content is protected !!