ಧರ್ಮಸ್ಥಳ- ನಾರಾವಿ ನಡುವಿನ ಸರ್ಕಾರಿ ಬಸ್ ತಡೆ ಹಿಡಿದಿರುವ ರಾಜ್ಯ ಸರ್ಕಾರದ ನಡೆ ಖಂಡಿಸಿ, ಎಬಿವಿಪಿ ಸಂಘಟಕರಿಂದ ಬೃಹತ್ ಪ್ರತಿಭಟನೆ
ಬೆಳ್ತಂಗಡಿ: ಧರ್ಮಸ್ಥಳ- ನಾರಾವಿ ಹೆದ್ದಾರಿಗೆ ಸರ್ಕಾರಿ ಬಸ್ ತಡೆಹಿಡಿದಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೆಳ್ತಂಗಡಿ ವತಿಯಿಂದ ಬೃಹತ್ ಪ್ರತಿಭಟನೆಯು ಆ.25 ರಂದು ನಡೆಯಿತು.
ಬೆಳ್ತಂಗಡಿ ತಾಲೂಕಿನ ನಾರಾವಿ ಅಳದಂಗಡಿ ಭಾಗದಿಂದ ತಾಲೂಕಿನ ಶಾಲಾ ಕಾಲೇಜುಗಳಿಗೆ ಹಲವಾರು ವಿದ್ಯಾರ್ಥಿಗಳು ಬರುತ್ತಿದ್ದು ಇವರು ಸರ್ಕಾರಿ ಬಸ್ಸಿನ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಇದಕ್ಕೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸರ್ಕಾರಿ ಬಸ್ ಗೆ ಮನವಿ ನೀಡಿದ್ದರು. ಇದಕ್ಕೆ ಸರಿಯಾಗಿ ಸರ್ಕಾರಿ ಬಸ್ ನ ವ್ಯವಸ್ಥೆಗೆ ಆದೇಶ ಹೊರಡಿಸಿದ್ದು ಇದೀಗ ರಾಜ್ಯ ಸರ್ಕಾರ ಬಸ್ ಅನ್ನು ತಡೆಹಿಡಿದಿರುವ ಕಾರಣ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಬೃಹತ್ ಪ್ರತಿಭಟನೆಯನ್ನು ನಡೆಸಲಾಯಿತು.
ಹಲವಾರು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.