ಬೆಳ್ತಂಗಡಿ: ಸೌಜನ್ಯ ಪ್ರಕರಣ: ಮರುತನಿಖೆಗೆ ಒತ್ತಾಯ ಹಾಗೂ ನೈಜ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ, ಬಿಜೆಪಿಯಿಂದ ಪ್ರತಿಭಟನಾ ಸಭೆ
ಬೆಳ್ತಂಗಡಿ: ಸೌಜನ್ಯ ಪ್ರಕರಣದ ಮರುತನಿಖೆಗೆ ಒತ್ತಾಯಿಸಿ ಹಾಗೂ ನೈಜ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಬೆಳ್ತಂಗಡಿ ಯ ಆಡಳಿತ ಸೌಧದ ಮುಂಭಾಗ ಭಾರತೀಯ ಜನತಾ ಪಾರ್ಟಿ ಇಂದು ಪ್ರತಿಭಟನಾ ಸಭೆ ಜರುಗಿತು.
ಸಭೆಯಲ್ಲಿ ಸೌಜನ್ಯಳ ಅಜ್ಜ ಬಾಬು ಗೌಡ, ತಾಯಿ ಕುಸುಮಾವತಿ, ಬಿಜೆಪಿ ರಾಜ್ಯ ಅಧ್ಯಕ್ಷರು ಹಾಗೂ ಸಂಸದರಾದ ನಳಿನ್ ಕುಮಾರ್ ಕಟೀಲ್, ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ್ ಮೂಡಬಿದ್ರೆ, ಉಡುಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡು ಸುರೇಶ್ ನಾಯಕ್, ಮಾಜಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ವಿ ಸುನೀಲ್ ಕುಮಾರ್ ಹಾಗೂ ಉಭಯ ಜಿಲ್ಲೆಗಳ ಶಾಸಕರು, ಮಾಜಿ ಶಾಸಕರು, ಪಕ್ಷದ ಪದಾಧಿಕಾರಿಗಳು ಹಾಗೂ ಸಹಸ್ರಾರು ಸಂಖ್ಯೆಯ ಕಾರ್ಯಕರ್ತರು ಉಪಸ್ಥಿತರಿದ್ದರು.