ಉಜಿರೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ:ಕೊಲ್ಪಾಡಿ ಶಾಲೆಯ ವಿದ್ಯಾರ್ಥಿನಿ ತನಿಷ್ಕ ತಾಲೂಕು ಮಟ್ಟಕ್ಕೆ ಆಯ್ಕೆ
ಉಜಿರೆ: ಇಲ್ಲಿನ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬದನಾಜೆಯಲ್ಲಿ ನಡೆದ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ,ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಒಟ್ಟು12 ಮಕ್ಕಳು ಭಾಗವಹಿಸಿದ್ದು,ಅದರಲ್ಲಿ ಹಿರಿಯ ವಿಭಾಗದ ಕತೆ ಹೇಳುವ ಸ್ಪರ್ಧೆಯಲ್ಲಿ ತನಿಷ್ಕ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಹಿರಿಯ ವಿಭಾಗದ ಕನ್ನಡ ಕಂಠಪಾಠ ಸ್ಪರ್ಧೆಯಲ್ಲೂ ಇವಳು ತೃತೀಯ ಸ್ಥಾನ ಪಡೆದಿರುತ್ತಾಳೆ.ಕಿರಿಯ ವಿಭಾಗದ ಛದ್ಮವೇಷ ಸ್ಪರ್ಧೆಯಲ್ಲಿ ಮನ್ವಿತ್ ಎಂ.ಎಸ್.ದ್ವಿತೀಯ ಸ್ಥಾನ ಪಡೆದಿರುತ್ತಾನೆ.