• October 13, 2024

ರೈತ ವಿರೋಧಿ ಕಾಂಗ್ರೆಸ್ ಸರ್ಕಾರದ ನಿಲುವು ವಿರೋಧಿಸಿ ಬೆಳ್ತಂಗಡಿ ಮಂಡಲದ ರೈತ ಮೋರ್ಚಾದ ವತಿಯಿಂದ ಪ್ರತಿಭಟನೆ

 ರೈತ ವಿರೋಧಿ ಕಾಂಗ್ರೆಸ್ ಸರ್ಕಾರದ ನಿಲುವು ವಿರೋಧಿಸಿ ಬೆಳ್ತಂಗಡಿ ಮಂಡಲದ ರೈತ ಮೋರ್ಚಾದ ವತಿಯಿಂದ ಪ್ರತಿಭಟನೆ

 

ಬೆಳ್ತಂಗಡಿ : ಬೆಳ್ತಂಗಡಿ ಮಿನಿವಿಧಾನಸಭಾ ಕಟ್ಟಡದಲ್ಲಿರುವ ತಾಲೂಕು ಆಫೀಸಿನ ಎದುರುಗಡೆ ಬೆಳ್ತಂಗಡಿ ಮಂಡಲದ ರೈತ ಮೋರ್ಚಾದ ವತಿಯಿಂದ ಮಳೆಯ ಅಭಾವದಿಂದ ಉಂಟಾಗಿರುವ ಬರಗಾಲದ ಸಮಸ್ಯೆ, ವಿದ್ಯುತ್ ಅಭಾವದಿಂದ ರೈತರ ಪಂಪ್ ಸೆಟ್ ಗಳಿಗೆ ಅನಿಯಮಿತ ಲೋಡ್ ಶೆಡ್ಡಿಂಗ್ ಮತ್ತು ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಆಡಳಿತದ ಅವಧಿಯಲ್ಲಿ ಬಿಜೆಪಿ ನೇತೃತ್ವದ ಆಡಳಿತದ ಸಂದರ್ಭದ ರೈತಪರ ಯೋಜನೆಗಳನ್ನು ರದ್ದುಗೊಳಿಸಿರುವುದು ಮತ್ತು ರಾಜ್ಯದಲ್ಲಿ ಹೆಚ್ಚುತ್ತಿರುವ ರೈತರ ಆತ್ಮಹತ್ಯೆ ಪ್ರಕರಣಗಳನ್ನು ತಡೆಯುವ ಕುರಿತು ಪ್ರತಿಭಟನೆಯನ್ನು ಹಮ್ಮಿಕೊಂಡು ಬೆಳ್ತಂಗಡಿ ತಹಶೀಲ್ದಾರರ ಮುಖಾಂತರ ಮನವಿಯನ್ನು ಮಾನ್ಯ ಸಿದ್ದರಾಮಯ್ಯ ಮುಖ್ಯಮಂತ್ರಿಯವರಿಗೆ ಇಂದು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಡಾ ನವೀನ್ ರಾಜ್ಯ ಕಾರ್ಯದರ್ಶಿ, ಮಹೇಶ್ ಕುಮಾರ್ ಮೇನಾಲ ಜಿಲ್ಲಾ ರೈತ ಮೋರ್ಚಾ ಉಪಾಧ್ಯಕ್ಷರು, ವಸಂತ ಅಣ್ಣಲಿಕೆ,ರಾಘವೇಂದ್ರ ಭಟ್ ಜಿಲ್ಲಾ ಕಾರ್ಯದರ್ಶಿ, ಮಂಡಲ ರೈತ ಮೋರ್ಚಾ ಅಧ್ಯಕ್ಷ ಜಯಂತ ಗೌಡ ಗುರಿಪಲ್ಲ, ಮಂಡಲ ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ನಾವೂರು, ಮಂಡಲ ಉಪಾಧ್ಯಕ್ಷ ಸೀತಾರಾಮ ಬಿ ಎಸ್, ರೈತ ಮೋರ್ಚಾ ಪ್ರ.ಕಾರ್ಯದರ್ಶಿ ಗಳಾದ ಕಾಂತಪ್ಪ ಗೌಡ, ಕೆ ವಿ ಪ್ರಸಾದ್, ಎಲ್ ಡಿ ಬ್ಯಾಂಕ್ ಉಪಾಧ್ಯಕ್ಷ ಆನಂದ ಗೌಡ, ಆನಂದ್ ನಾಯ್ಕ್ ದನಿಲ ಹತ್ಯಡ್ಕ. ಪ್ರಕಾಶ್ ಎಳನೀರು ಮಲವಂತಿಗೆ ಗ್ರಾಮ ಪಂಚಾಯತ್ ಅಧ್ಯಕ್ಷ ರು ದಿನೇಶ್ ಗೌಡ ಮಲವಂತಿಗೆ ರಾಧಾಕೃಷ್ಣ, ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Related post

Leave a Reply

Your email address will not be published. Required fields are marked *

error: Content is protected !!