ಬಳಂಜ:ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ನೂತನ ಆಡಳಿತ ಮಂಡಳಿ ರಚನೆ: ಅಧ್ಯಕ್ಷರಾಗಿ ಯುವ ನಾಯಕ ಸಂತೋಷ್ ಪಿ ಕೋಟ್ಯಾನ್ ಬಳಂಜ ಆಯ್ಕೆ
ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ,ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಬಳಂಜ,ನಾಲ್ಕೂರು,ತೆಂಕಕಾರಂದೂರು ಇದರ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಸಾಮಾಜಿಕ,ಧಾರ್ಮಿಕ,ಶೈಕ್ಷಣಿಕ ಕ್ಷೇತ್ರದ ಯುವ ಮುಂದಾಳು ಸಂತೋಷ್ ಪಿ ಕೋಟ್ಯಾನ್ ಬಳಂಜ ಆಯ್ಕೆಯಾಗಿದ್ದಾರೆ.
ಒಂದೇ ಜಾತಿ,ಒಂದೇ ಮತ, ಒಬ್ಬನೇ ದೇವರು ಎಂಬ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಸಂದೇಶಗಳನ್ನು ಪರಿಪಾಲಿಸಿಕೊಂಡು ಬರುತ್ತಿರುವ
ಸುಮಾರು 44 ವರ್ಷಗಳ ಪರಂಪರೆಯಿರುವ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಗೌರವಾಧ್ಯಕ್ಷ ಹೆಚ್.ಧರ್ಣಪ್ಪ ಪೂಜಾರಿ ಮತ್ತು ಗೌರವ ಮಾರ್ಗದರ್ಶಕ ಕೆ.ವಸಂತ ಸಾಲಿಯಾನ್ ಹಾಗೂ ಮಾಜಿ ಅಧ್ಯಕ್ಷರ ಮಾರ್ಗದರ್ಶನದಲ್ಲಿ,ಸಮಿತಿ ಸದಸ್ಯರ ಸಹಕಾರದೊಂದಿಗೆ ಮುನ್ನಡೆಯುತ್ತಿದೆ.
ಸಂಘದ ಉಪಾಧ್ಯಕ್ಷರಾಗಿ ರವೀಂದ್ರ ಬಿ ಅಮೀನ್ ಮಜಲು,ಪ್ರಧಾನ ಕಾರ್ಯದರ್ಶಿಯಾಗಿ ಜಗದೀಶ್ ಪೂಜಾರಿ ಬಳ್ಳಿದಡ್ಡ,ಕೋಶಾಧಿಕಾರಿಯಾಗಿ ಪ್ರವೀಣ್ ಕುಮಾರ್ ಹೆಚ್.ಎಸ್,
ಜೊತೆ ಕಾರ್ಯದರ್ಶಿಯಾಗಿ ಪ್ರವೀಣ್ ಡಿ ಕೋಟ್ಯಾನ್ ದರ್ಖಾಸು ಆಯ್ಕೆಯಾಗಿದ್ದಾರೆ.
ನಿರ್ದೇಶಕರಾಗಿ ಸಂತೋಷ್ ಕುಮಾರ್ ಕಾಪಿನಡ್ಕ, ದಿನೇಶ್ ಕೋಟ್ಯಾನ್ ಕುದ್ರೋಟ್ಟು,ದಿನೇಶ್ ಪೂಜಾರಿ ಅಂತರ,ಯೋಗೀಶ್ ಪೂಜಾರಿ ಯೈಕುರಿ, ಯತೀಶ್ ವೈ.ಎಲ್ ಬಳಂಜ,ಸದಾನಂದ ಪೂಜಾರಿ ಬೊಂಟ್ರೋಟ್ಡು,ಪ್ರವೀಣ್ ಪೂಜಾರಿ ಲಾಂತ್ಯಾರು,ಜಗದೀಶ್ ಪೂಜಾರಿ ತಾರಿಪಡ್ಪು,ರಂಜಿತ್ ಪೂಜಾರಿ ಮಜಲಡ್ಡ,ರಕ್ಷಿತ್ ಪೂಜಾರಿ ಬಗ್ಯೋಟ್ಟು,ಪವನ್ ಪೂಜಾರಿ ಕಟ್ಟೆ ಆಯ್ಕೆಯಾಗಿದ್ದಾರೆ.