• September 12, 2024

ಹುಣ್ಸೆಕಟ್ಟೆ ಅಂಗನವಾಡಿ ಕೇಂದ್ರದಲ್ಲಿ ಪೋಷಣ ಅಭಿಯಾನ ಕಾರ್ಯಕ್ರಮ

 ಹುಣ್ಸೆಕಟ್ಟೆ ಅಂಗನವಾಡಿ ಕೇಂದ್ರದಲ್ಲಿ ಪೋಷಣ ಅಭಿಯಾನ ಕಾರ್ಯಕ್ರಮ

ಹುಣ್ಸೆಕಟ್ಟೆ: ಕರ್ನಾಟಕ ಸರಕಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ , ಶಿಶು ಅಭಿವೃದ್ಧಿ ಯೋಜನೆ ವತಿಯಿಂದ ಅಂಗನವಾಡಿ ಕೇಂದ್ರ ಹುಣ್ಸೆಕಟ್ಟೆ ಯಲ್ಲಿ ಸೆ.26 ರಂದು ಪೋಷಣ ಅಭಿಯಾನ ಕಾರ್ಯಕ್ರಮ ಜರುಗಿತು.

ಕಾರ್ಯಕ್ರಮವನ್ನು ಬೆಳ್ತಂಗಡಿ ಸಾರ್ವಜನಿಕ ಸರಕಾರಿ ಆಸ್ಪತ್ರೆಯ ಮರಿಯಮ್ಮ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ ಪೌಷ್ಠಿಕ ಆಹಾರದ ಬಗ್ಗೆ ಮಾಹಿತಿಯನ್ನು ವಿವರವಾಗಿ ತಿಳಿಸಿದರು.

ಸಿಎಚ್ ಒ ಸುಂದರ್ ರಾಜ್ ಪೌಷ್ಠಿಕ ಆಹಾರದ ಅಗತ್ಯತೆಯ ಬಗ್ಗೆ ಮನಮುಟ್ಟುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ಸಿಎಚ್ ಒ ಸತೀಶ್, ವಿಘ್ನೇಶ್, ಅಖಿಲ, ಸ.ಕಿ.ಪ್ರಾ ಶಾಲೆಯ ಮುಖ್ಯೋಪಾಧ್ಯಾಯರಾದ ಕರಿಯಪ್ಪ, ಅಂಗನವಾಡಿ ಕಮಿಟಿಯ ಪುಷ್ಪ, ಅಂಗನವಾಡಿ ಮಕ್ಕಳ ಪೋಷಕರು ಹಾಗೂ ಮಕ್ಕಳು ಉಪಸ್ಥಿತರಿದ್ದರು.

ನಂತರ ಕಾರ್ಯಕ್ರಮದಲ್ಲಿ ಉಚಿತವಾಗಿ ಬಿಪಿ ಹಾಗೂ ಶುಗರ್ ತಪಾಸಣೆ ಮಾಡಲಾಯಿತು.

Related post

Leave a Reply

Your email address will not be published. Required fields are marked *

error: Content is protected !!