ಶ್ರೀ. ಧ.ಮಂ.ಆ.ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಲಾಲ್ ಬಹದ್ದೂರ್ ಶಾಸ್ರೀ ಜನ್ಮ ದಿನಾಚರಣೆ ಹಾಗೂ ಗಾಂಧಿ ಜಯಂತಿ ಆಚರಣೆ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಲಾಲ್ ಬಹದ್ದೂರ್ ಶಾಸ್ರೀ ಜನ್ಮ ದಿನಾಚರಣೆ ಹಾಗೂ ಗಾಂಧಿ ಜಯಂತಿ ಆಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.
ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮವು ನಿಡ್ಲೆ ಸರಕಾರಿ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾಗಿರುವ ರಾಜಗುರು ಹೆಬ್ಬಾರ್ ಹಾಗೂ ಶಾಲಾ ಸಂಚಾಲಕರಾದ ಅನಂತಪದ್ಮನಾಭ ಭಟ್ ಅವರ ಅಮೃತ ಹಸ್ತದಿಂದ ದೀಪ ಪ್ರಜ್ವಲನಗೊಂಡು ಶಾಸ್ತ್ರಿಜಿ ಹಾಗೂ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಅರ್ಪಿಸಿ ಗಾಂಧೀಜಿಯವರ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಹೋರಾಟದ ಯಶೋಗಾಥೆ ಹಾಗೂ ಅವರ ಆದರ್ಶಗಳನ್ನು ಕುರಿತು ವಿದ್ಯಾರ್ಥಿಗಳ ಮುಂದೆ ಪ್ರಸ್ತುತ ಪಡಿಸಿ ತಿಳಿಯಪಡಿಸುವ ಮುಖಾಂತರ ವಿದ್ಯಾರ್ಥಿಗಳ ಕರ್ತವ್ಯವನ್ನು ಎಚ್ಚರಿಸಿದರು.
ತದನಂತರ ಸರ್ವ ಧರ್ಮ ಪ್ರಾರ್ಥನೆ ರಘುಪತಿ ರಾಘವ ಭಜನೆಗಳನ್ನು ಹೇಳಲಾಯಿತು.ತದನಂತರ ವಿದ್ಯಾರ್ಥಿಗಳು ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಿದರು.
ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳ ಎಂವಿ ಗಾಂಧೀಜಿಯ ಆದರ್ಶಗಳ ಪರಿಪಾಲನೆ ಶಾಸ್ತ್ರಿಯವರ ನಿಷ್ಠೆ ಇದರ ಕುರಿತು ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು.
ಶಾಲಾ ಸಹಶಿಕ್ಷಕಿ ಅನ್ನಪೂರ್ಣ ನಡೆಸಿಕೊಟ್ಟ ಕಾರ್ಯಕ್ರಮದಲ್ಲಿ ಅಂಜು ಸ್ವಾಗತಿಸಿ ಶ್ರೀಮತಿ ಗೀತಾ ವಂದಿಸಿದರು.