• October 14, 2024

ಸ.ಉ.ಹಿ.ಪ್ರಾ ಶಾಲೆ ಓಡಿಲ್ನಾಳದಲ್ಲಿ ವಾಣಿ ಕಾಲೇಜು ಎನ್ ಎಸ್ಎಸ್ ವಾರ್ಷಿಕ ಶಿಬಿರ

 ಸ.ಉ.ಹಿ.ಪ್ರಾ ಶಾಲೆ ಓಡಿಲ್ನಾಳದಲ್ಲಿ ವಾಣಿ ಕಾಲೇಜು ಎನ್ ಎಸ್ಎಸ್ ವಾರ್ಷಿಕ ಶಿಬಿರ

 

ಬೆಳ್ತಂಗಡಿ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಓಡಿಲ್ನಾಳದಲ್ಲಿ ವಾಣಿ ಕಾಲೇಜು ಎನ್ ಎಸ್ ಎಸ್ ವಾರ್ಷಿಕ ಶಿಬಿರವು ಇಂದು ಜರುಗಿತು.

ಶಿಬಿರವನ್ನು ಕುವೆಟ್ಟು ಗ್ರಾ.ಪಂ ಅಧ್ಯಕ್ಷರಾದ ಭಾರತಿ ಶೆಟ್ಟಿ ಉದ್ಘಾಟಿಸಿ, ವಿದ್ಯಾರ್ಥಿಗಳು ಜಾಗೃತಿಯನ್ನು ಹೊಂದಿ ದೇಶದ ಬೆಳವಣಿಗೆಗೆ ಪೂರಕವಾದ ಸೇವೆಯಲ್ಲಿ ತೋಡಗಿಸಿಕೊಳ್ಳಬೇಕು. ಸ್ವಚ್ಛ ಪರಿಸರದ ನಿರ್ಮಾಣದಲ್ಲಿ ತೊಡಗಿಕೊಂಡು ಭವಿಷ್ಯದ ಭವ್ಯ ಭಾರತದ ರೂವಾರಿಗಳಾಗಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಾಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಕುಶಾಲಪ್ಪ ಗೌಡ ಪಿ ವಹಿಸಿದ್ದರು. ವಾಣಿ ಶಿಕ್ಷಣ ನಿರ್ದೇಶಕರಾದ ಜಯಾನಂದ ಗೌಡ, ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀಮತಿ ಮಮತಾ.ಯಂ .ಶೆಟ್ಟಿ, ಒಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಪ್ರಭಾಕರ ಶೆಟ್ಟಿ ಉಪ್ಪಡ್ಕ, ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಚಿದಾನಂದ ಇಡ್ಯಾ, ಮದ್ದಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾದ ಗೋಪಾಲ ಶೆಟ್ಟಿ ಕೋರಿಯಾರು, ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಗೌರವಾಧ್ಯಕ್ಷರಾದ ಶ್ರೀಮತಿ ಶಾಂತ .ಜಿ. ಬಂಗೇರಾ, ಓಡಿಲ್ನಾಳ ಶಾಲಾ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಶ್ರೀಮತಿ ಶಮಿಮಾ ಪಾದೆ, ಶಾಲಾ ದೈಹಿಕ ನಿರ್ದೇಶಕರಾದ ನಿರಂಜನ್, ವಾಣಿ ಕಾಲೇಜಿನ ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಶಂಕರ್ ರಾವ್. ಬಿ ಉಪಸಿತರಿದ್ದರು.

ಕಾಲೇಜಿನ ಉಪ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್.ಯಂ ಸ್ವಾಗತಿಸಿದರು. ಪ್ರಾಂಶುಪಾಲರಾದ ಡಿ. ಯದುಪತಿ ಗೌಡ ಪ್ರಸ್ತಾವನೆಗೈದರು. ಎನ್ಎಸ್ಎಸ್ ಸಹ ಕಾರ್ಯಕ್ರಮಾಧಿಕಾರಿ ಕು/ ಕಾಮಾಕ್ಷಿ ವಂದಿಸಿದರು. ಉಪನ್ಯಾಸಕಿ ಶ್ರೀಮತಿ ಮೀನಾಕ್ಷಿ ಕಾರ್ಯಕ್ರಮ ನಿರೂಪಿಸಿದರು.

Related post

Leave a Reply

Your email address will not be published. Required fields are marked *

error: Content is protected !!