• September 21, 2024

2023-24 ನೇ ಸಾಲಿನ ಕೃಷಿ ವಿಸ್ತರಣಾ ಕಾರ್ಯಕ್ರಮಗಳಿಗೆ ವಿದ್ಯುಕ್ತ ಚಾಲನೆ: ಕೃಷಿ ಯಂತ್ರೋಪಕರಣಗಳ ವಿತರಣಾ ಕಾರ್ಯಕ್ರಮ

 2023-24 ನೇ ಸಾಲಿನ ಕೃಷಿ ವಿಸ್ತರಣಾ ಕಾರ್ಯಕ್ರಮಗಳಿಗೆ ವಿದ್ಯುಕ್ತ ಚಾಲನೆ:   ಕೃಷಿ ಯಂತ್ರೋಪಕರಣಗಳ ವಿತರಣಾ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಧರ್ಮಸ್ಥಳ ವತಿಯಿಂದ 2023-24 ನೇ ಸಾಲಿನ ಕೃಷಿ ವಿಸ್ತರಣಾ ಕಾರ್ಯಕ್ರಮಗಳಿಗೆ ವಿದ್ಯುಕ್ತ ಚಾಲನೆ ಮತ್ತು ಕೃಷಿ ಯಂತ್ರೋಪಕರಣಗಳ ವಿತರಣಾ ಕಾರ್ಯಕ್ರಮವು ಧರ್ಮಸ್ಥಳ ಮಹೋತ್ಸವ ಸಭಾಭವನದಲ್ಲಿ ಇಂದು ಜರುಗಿತು.

2023-24 ನೇ ಸಾಲಿನ ಕೃಷಿ ವಿಸ್ತರಣಾ ಕಾರ್ಯಕ್ರಮಕ್ಕೆ ಕೃಷಿ ಸಚಿವರಾದ ಎನ್ ಚೆಲುವರಾಯ ಸ್ವಾಮಿ ವಿದ್ಯುಕ್ತ ಚಾಲನೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮತ್ತು ಕೃಷಿ ಯಂತ್ರೋಪಕರಣಗಳ ವಿತರಣೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ದ ಧರ್ಮಾಧಿಕಾರಿಗಳಾದ ಪೂಜ್ಯ ಡಾ ಡಿ ವೀರೇಂದ್ರ ಹೆಗ್ಗಡೆಯವರು ಹಸ್ತಾಂತರಿಸಿದರು.

ವಿಧಾನಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ್ ವಾರ್ಷಿಕ ಸಸಿ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಜ್ಞಾನವಿಕಾಸ ಕಾರ್ಯಕ್ರಮದ ಅಧ್ಯಕ್ಷರು ಮಾತೃಶ್ರೀ ಡಾ ಹೇಮಾವತಿ ವೀ ಹೆಗ್ಗಡೆಯವರು ಕೃಷಿ ಕಾರ್ಯಕ್ರಮಗಳ ವಾರ್ಷಿಕ ವರದಿ ಬಿಡುಗಡೆಗೊಳಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ ಹರ್ಷೇಂದ್ರ ಕುಮಾರ್ ಕೃಷಿ ವಿಸ್ತರಣಾ ಕಾರ್ಯಕ್ರಮಗಳ ಮಾಹಿತಿಪತ್ರ ಬಿಡುಗಡೆಗೊಳಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರು ಡಾ ಎಲ್ ಮಂಜುನಾಥ್ ಆಶಯ ಭಾಷಣ ಮತ್ತು ಸ್ವಾಗತವನ್ನು ಮಾಡಿದರು.

Related post

Leave a Reply

Your email address will not be published. Required fields are marked *

error: Content is protected !!