• September 21, 2024

ಬೆಳ್ತಂಗಡಿ ಅಂಗ ಸಂಸ್ಥೆಯ ವಾರ್ಷಿಕ ಮಹಾಸಭೆ

 ಬೆಳ್ತಂಗಡಿ ಅಂಗ ಸಂಸ್ಥೆಯ ವಾರ್ಷಿಕ ಮಹಾಸಭೆ

ಉಜಿರೆ: ಉಜಿರೆ ಶ್ರೀರಾಮಕೃಷ್ಣ ಸಭಾ ಮಂಟಪದಲ್ಲಿ ಕೂಟ ಮಹಾಜಗತ್ತು ಬೆಳ್ತಂಗಡಿ ಅಂಗ ಸಂಸ್ಥೆಯ 24ನೇ ವಾರ್ಷಿಕ ಮಹಾಸಭೆ ಆ.28 ರಂದು ಜರಗಿತು.

ಬೆಳ್ತಂಗಡಿ ಅಂಗ ಸಂಸ್ಥೆಯ ಅಧ್ಯಕ್ಷರು ಮತ್ತು ಕೂಟ ಮಹಾ ಜಗತ್ತು ಕೇಂದ್ರ ಸಂಸ್ಥೆಯ ಕೋಶಾಧಿಕಾರಿಗಳಾದ ಬಿ ವಾಸುದೇವ ಸೋಮಯಾಜಿ ಮಹಾಸಭೆಯ ಅಧ್ಯಕ್ಷತೆ ವಹಿಸಿದ್ದರು.

ಕೂಟ ಮಹಾ ಜಗತ್ತು ಕೇಂದ್ರ ಸಂಸ್ಥೆಯ ಅಧ್ಯಕ್ಷರಾದ ಹೆಚ್ ಸತೀಶ್ ಹಂದೆ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಕೂಟ ಮಹಾ ಜಗತ್ತಿನ ಸದಸ್ಯರ ಸಂಖ್ಯೆ ಹೆಚ್ಚಳ ಮಾಡುವುದರಿಂದ ಸರ್ಕಾರದ ಸವಲತ್ತುಗಳನ್ನು ಪಡೆದುಕೊಳ್ಳಲು ಕೂಟ ಬ್ರಾಹ್ಮಣರಿಗೆ ಅವಕಾಶವಾಗುತ್ತದೆ. ಹಾಗಾಗಿ 18 ವರ್ಷ ತುಂಬಿದ ಪ್ರತಿಯೊಬ್ಬರು ಕೂಟ ಮಹಾ ಜಗತ್ತಿನ ಆಜೀವ ಸದಸ್ಯತ್ವವನ್ನು ಪಡೆದುಕೊಳ್ಳಬೇಕೆಂದು ಕರೆ ನೀಡಿದರು .

ಸಾಲಿಗ್ರಾಮದಲ್ಲಿ ಕೂಟ ಬಂದು ಭವನ ನಿರ್ಮಾಣದ ಮಾಹಿತಿ ನೀಡಿ ಹೆಚ್ಚಿನ ಧನಸಹಾಯವನ್ನು ಬೆಳ್ತಂಗಡಿ ಸೇರಿದಂತೆ ಎಲ್ಲಾ ಅಂಗಸಂಸ್ಥೆಗಳಿಂದ ನಿರೀಕ್ಷಿಸುವುದಾಗಿ ಈ ಸಂದರ್ಭದಲ್ಲಿ ಅವರು ಹೇಳಿದರು.

ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರಾದ ಸದಾಶಿವ ಐತಾಳ್ ಸಮಾರಂಭದಲ್ಲಿ ಭಾಗವಹಿಸಿ ಗುರು ಸಂದೇಶವನ್ನು ನೀಡಿ ಕೂಟ ಬಂಧುಗಳು ಹೆಚ್ಚು ಸಮನ್ವಯದಿಂದ ಸಂಘಟಿತರಾಗುವಂತೆ ಕರೆ ನೀಡಿದರು.

ಕಾಟಿಪಳ್ಳ ಅಂಗ ಸಂಸ್ಥೆಯ ನೇತೃತ್ವದಲ್ಲಿ ನಡೆಯುವ ಕೇಂದ್ರೀಯ ಮಹಾಸಭೆಯ ಕುರಿತು ಸಭೆಗೆ ಮಾಹಿತಿ ನೀಡಿ ಆಮಂತ್ರಣ ಪತ್ರಿಕೆಯನ್ನು ವಿತರಿಸಿದರು.

ಕೂಟ ಮಹಾ ಜಗತ್ತು ಕೇಂದ್ರ ಸಂಸ್ಥೆಯ ಪ್ರಧಾನ ಕಾರ್ಯದರ್ಶಿಗಳಾದ ರಮೇಶ್ ರಾವ್ ಎಸ್ ವಿ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.

ಅಂಗ ಸಂಸ್ಥೆಯ ವ್ಯಾಪ್ತಿಯಲ್ಲಿ ಎಸ್ ಎಸ್ ಎಲ್ ಸಿ ,ಪಿಯುಸಿ ಹಾಗೂ ಲಲಿತ ಕಲೆಗಳಲ್ಲಿ ಸಾಧನೆ ಮಾಡಿದ ಪ್ರತಿಭಾನ್ವಿತರನ್ನು ಗುರುತಿಸಿ ಗೌರವಿಸಲಾಯಿತು. ಆಗಮಿಸಿದ ಅತಿಥಿಗಳನ್ನು ಅಂಗ ಸಂಸ್ಥೆ ಉಪಾಧ್ಯಕ್ಷರಾದ ಶ್ರೀ ವೆಂಕಟರಮಣ ರಾವ್ ಸ್ವಾಗತಿಸಿದರು. ಕಾರ್ಯದರ್ಶಿಗಳಾದ ವಿಷ್ಣು ಪ್ರಕಾಶ್ ವಾರ್ಷಿಕ ವರದಿಯನ್ನು ಮಂಡಿಸಿದರು. ಕೋಶಾಧಿಕಾರಿ ಶ್ರೀ ರಮೇಶ್ ಮಯ್ಯ ಲೆಕ್ಕಪತ್ರವನ್ನು ಮಂಡಿಸಿ ಸಭೆಯಿಂದ ಅನುಮೋದನೆ ಪಡೆದುಕೊಂಡರು. ಶ್ರೀ ಅರವಿಂದ ಕಾರಂತ ಬಿಲಿಯನ್ ಫೌಂಡೇಶನ್ ವರದಿಯನ್ನು ಮಂಡಿಸಿದರು. ಮಹಿಳಾ ವೇದಿಕೆ ವರದಿಯನ್ನು ಕಾರ್ಯದರ್ಶಿ ನಳಿನಿ ಎಸ್ ಹೊಳ್ಳ ಮಂಡಿಸಿದರು. ನಿಕಟ ಪೂರ್ವ ಅಧ್ಯಕ್ಷ ಶ್ರೀ ಬಿ ಸುಬ್ರಮಣ್ಯ ರಾವ್ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯನ್ನು ನೆರವೇರಿಸಿದರು. ಮಹಿಳಾ ವೇದಿಕೆಯ ಅಧ್ಯಕ್ಷ ಶ್ರೀಮತಿ ಪದ್ಮಾಕ್ಷಿ ಎಂ ರಾವ್ ಮಹಿಳಾ ವೇದಿಕೆಯ ನೂತನ ಪದಾಧಿಕಾರಿಗಳನ್ನು ಪರಿಚಯಿಸಿದರು. ಜೊತೆ ಕಾರ್ಯದರ್ಶಿ ಶ್ರೀ ಶಂಕರ್ ರಾವ್ ಧನ್ಯವಾದ ಸಮರ್ಪಿಸಿದರು. ಪ್ರಧಾನ ಕಾರ್ಯದರ್ಶಿ ಶ್ರೀ ವಿಷ್ಣು ಪ್ರಕಾಶ್ ಕಾರ್ಯಕ್ರಮವನ್ನು ನಿರ್ವಹಿಸಿದರು.

Related post

Leave a Reply

Your email address will not be published. Required fields are marked *

error: Content is protected !!