ಮಕ್ಕಳ ಭಾಗ್ಯವಿಲ್ಲದೆ ಬೇಸತ್ತ ದಂಪತಿಗಳ ಬಾಳಿಗೆ ಬೆಳಕಾದ ಆರಿಕೋಡಿ ಶ್ರೀ ಚಾಮುಂಡೇಶ್ವರಿ ಅಮ್ಮ
ಸುಳ್ಯ ತಾಲೂಕು ಸುಬ್ರಹ್ಮಣ್ಯ ಕಲ್ಮಕಾರ್ ಪರಿಸರದ ಭರತ್ ಮತ್ತು ಮಮತಾ ಎಂಬುವವರು ಸುಮಾರು 7 ವರ್ಷಗಳ ಹಿಂದೆ ಮದುವೆಯಾಗಿದ್ದು, ಅವರ ದಾಂಪತ್ಯ ಜೀವನದಲ್ಲಿ ಮಕ್ಕಳ ಭಾಗ್ಯ ಒದಗಿ ಬರಲಿಲ್ಲ. ಎಲ್ಲಾ ಪ್ರಯತ್ನ ಮಾಡಿದರು ಅವರ ದಾಂಪತ್ಯದಲ್ಲಿ ಜಯ ಸಿಗದೇ ಇದ್ದಾಗ
ಪವಿತ್ರ ಕ್ಷೇತ್ರವಾದ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಗೆ ಬಂದು, ದೇವಿ ಚಾಮುಂಡೇಶ್ವರಿಯ ಆಭಯ ನುಡಿಯಲ್ಲಿ ವಿಚಾರಣೆ ಮಾಡಿದ್ದಾರೆ. ಆ ಸಂದರ್ಭದಲ್ಲಿ ಸಮಸ್ಯೆಯನ್ನು ಪರಿಹಾರ ಮಾಡಿ ನಿಮಗೆ ಒಂದು ವರ್ಷದ ಒಳಗಡೆ ಮಕ್ಕಳ ಭಾಗ್ಯ ಒದಗಿ ಬರುತ್ತದೆ ಎಂದು ಅಭಯ ಕೊಡುತ್ತಾಳೆ. ಕೊಟ್ಟ ಮಾತಿನ ಪ್ರಕಾರವಾಗಿ ಅವರ ದಾಂಪತ್ಯದಲ್ಲಿ ಮಕ್ಕಳ ಭಾಗ್ಯ ಒದಗಿ ಬಂದಿದೆ. ಅವರ ದಾಂಪತ್ಯದ ಕತ್ತಲೆಯನ್ನು ದೂರ ಮಾಡಿದ ಶ್ರೀದೇವಿ ಚಾಮುಂಡೇಶ್ವರಿಗೆ ವಿಶೇಷವಾಗಿ ಪೂಜೆಯನ್ನು ಸಮರ್ಪಣೆ ಮಾಡಿದ್ದಾರೆ.