• June 24, 2024

ಕನ್ನಡ ಸಾಹಿತ್ಯ ಸಮ್ಮೇಳನವು ಸುವರ್ಣ ಕರ್ನಾಟಕದ ಆಶಯವನ್ನು ಬಿಂಬಿಸುವಂತಿರಲಿ; ಶಾಸಕ ಹರೀಶ್ ಪೂಂಜ

 ಕನ್ನಡ ಸಾಹಿತ್ಯ ಸಮ್ಮೇಳನವು ಸುವರ್ಣ ಕರ್ನಾಟಕದ ಆಶಯವನ್ನು ಬಿಂಬಿಸುವಂತಿರಲಿ; ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ : ದಿನಾಂಕ 17 ದಶಂಬರ 2023ರ ಆದಿತ್ಯವಾರದಂದು ವಾಣಿ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಜರಗಲಿರುವ ಬೆಳ್ತಂಗಡಿ ತಾಲೂಕು 18ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ತಯಾರಿ ಹಿನ್ನೆಲೆಯಲ್ಲಿ, ಸಮ್ಮೇಳನದ ಸಂಯೋಜನಾ ಸಮಿತಿಯ ವತಿಯಿಂದ ಶಾಸಕ ಹರೀಶ್ ಪೂಂಜ ಅವರನ್ನು ಭೇಟಿ ಮಾಡಲಾಯಿತು.

ಈ ಸಂದರ್ಭದಲ್ಲಿ ಶಾಸಕರ ಬಳಿ, ಸಮ್ಮೇಳನದ ಸಂಯೋಜನಾ ಸಮಿತಿಯ ಗೌರವಾಧ್ಯಕ್ಷರಾಗಿ ಮಾರ್ಗದರ್ಶನ ನೀಡುವಂತೆ, ಸಮ್ಮೇಳನದ ಯಶಸ್ಸಿಗೆ ಪೂರ್ಣ ಸಹಕಾರಕ್ಕಾಗಿ ವಿನಂತಿಸಿಕೊಳ್ಳಲಾಯಿತು.ಶಾಸಕರು ಸಮ್ಮೇಳನದ ಮಾಹಿತಿಯನ್ನು ಪಡೆದುಕೊಂಡು, ಯಾವ ರೀತಿಯಲ್ಲಿ ತಯಾರಿ ನಡೆಸಬೇಕೆಂಬುದರ ಬಗ್ಗೆ ವಿಚಾರ ವಿನಿಮಯ ನಡೆಸಿದರು. ಈ ಬಾರಿ ಸುವರ್ಣ ಕರ್ನಾಟಕ ವರ್ಷವಾದ್ದರಿಂದ ಸಮ್ಮೇಳನವು ಸುವರ್ಣ ಕರ್ನಾಟಕದ ಆಶಯವನ್ನು ಬಿಂಬಿಸುವಂತೆ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ತಮ್ಮ ಆಲೋಚನೆಗಳನ್ನು ಶಾಸಕರು ಅಭಿಪ್ರಾಯಗಳನ್ನು ಹಂಚಿಕೊಂಡರು.

ಈ ಸಂದರ್ಭದಲ್ಲಿ ಸಂಯೋಜನಾ ಸಮಿತಿಯ ಅಧ್ಯಕ್ಷ ಜಯಾನಂದ ಗೌಡ ಬೆಳ್ತಂಗಡಿ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ ಯದುಪತಿ ಗೌಡ, ಕಾರ್ಯದರ್ಶಿ ರಾಮಕೃಷ್ಣ ಭಟ್ ಬೆಳಾಲು, ಸಂಯೋಜನಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಮೋಹನ್ ಗೌಡ, ಊಟೋಪಚಾರ ಸಮಿತಿಯ ಸಂಚಾಲಕ ಲಕ್ಷ್ಮೀನಾರಾಯಣ ಕೆ, ಸನ್ಮಾನ ಸಮಿತಿಯ ಸಂಚಾಲಕ ಲಕ್ಷ್ಮಣ ಪೂಜಾರಿ ಇವರು ಜೊತೆಗಿದ್ದರು.

Related post

Leave a Reply

Your email address will not be published. Required fields are marked *

error: Content is protected !!