• December 6, 2024

ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಕವಿ ನಮನ ಕಾರ್ಯಕ್ರಮ

 ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಕವಿ ನಮನ ಕಾರ್ಯಕ್ರಮ

 


ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಕುವೆಂಪುರ ಜನ್ಮ ದಿನಾಚರಣೆಯ ಪ್ರಯುಕ್ತ ಕವಿ ನಮನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಬೆಳಗಿನ ಸಮಯದಲ್ಲಿ ಶಾಲಾ ಪ್ರಾರಂಭಕ್ಕೂ ಮುನ್ನ ಕವಿ ಕುವೆಂಪು ವಿರಚಿತ ಹಾಡುಗಳನ್ನು ವಿದ್ಯಾರ್ಥಿಗಳಿಗೆ ಕೇಳಿಸಲಾಯಿತು. ಕುವೆಂಪುರವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಲಾಯಿತು. ತದನಂತರ ಈ ಕಾರ್ಯಕ್ರಮದಲ್ಲಿ ಪ್ರಾರ್ಥನಾ ಸಮಯದಲ್ಲಿ ವಿದ್ಯಾರ್ಥಿಗಳು ಕುವೆಂಪುರವರ ಹಾಡುಗಳನ್ನು ಹಾಡಿದರು. ಶಾಲಾ ಶಿಕ್ಷಕಿ ಶ್ರೀಮತಿ ಆಶಾ ಕುವೆಂಪುರವರ ಆಶಯ ಹಾಗೂ ವಿದ್ಯಾರ್ಥಿಗಳು ಅದನ್ನು ಪಾಲಿಸಬೇಕಾದ ಅನಿವಾರ್ಯತೆಯನ್ನು ತಿಳಿಸಿದರು.

ಸಹ ಶಿಕ್ಷಕಿಯಾದ ಶ್ರೀಮತಿ ದಿವ್ಯ ಆರ್ ತಮ್ಮ ಕವನದ ಮೂಲಕ ಕುವೆಂಪುರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಅವರ ಮಾರ್ಗದರ್ಶನದಲ್ಲಿ ಮೂಡಿ ಬಂದ ಈ ಕಾರ್ಯಕ್ರಮ ಅರ್ಥಪೂರ್ಣವಾಗಿತ್ತು. ಶಾಲಾ ಶಿಕ್ಷಕ ಶಿಕ್ಷಕೇತರ ಹಾಗೂ ವಿದ್ಯಾರ್ಥಿ ವೃಂದ ಈ ಕಾರ್ಯಕ್ರಮಕ್ಕೆ ಸಾಕ್ಷಿಯಾಯಿತು.

Related post

Leave a Reply

Your email address will not be published. Required fields are marked *

error: Content is protected !!