• September 12, 2024

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಮಾದಕ ವ್ಯಸನದ ಬಗ್ಗೆ ಜಾಗೃತಿ ಕಾರ್ಯಕ್ರಮ

 ಶ್ರೀ  ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಮಾದಕ ವ್ಯಸನದ ಬಗ್ಗೆ ಜಾಗೃತಿ ಕಾರ್ಯಕ್ರಮ


ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಮಾದಕ ವ್ಯಸನದ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿರುವ ಶ್ರೀಮತಿ ಅನನ್ಯ ಲಕ್ಷ್ಮಿ ಸಂದೀಪ್ ಮಾದಕ ವ್ಯಸನಗಳು ಅಂದರೆ ಏನು? ಅದರಿಂದಾಗುವ ಪರಿಣಾಮಗಳೇನು? ವಿದ್ಯಾರ್ಥಿಗಳು ಹೇಗೆ ಎಚ್ಚೆತ್ತುಕೊಳ್ಳಬೇಕು ಹೇಗೆ ತಮ್ಮ ಭವಿಷ್ಯವನ್ನು ಜತನದಿಂದ ಕಾಯ್ದುಕೊಳ್ಳಬೇಕು ತಿಂಡಿ ತ್ಯಾದಿ ಹತ್ತು ಹಲವು ವಿಚಾರಗಳನ್ನು ಕಥೆ ಹಾಸ್ಯ ಹಾಗೂ ವಿವಿಧ ಚಟುವಟಿಕೆಗಳ ಮುಖಾಂತರ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿದರು.

ಶಾಲಾ ವಿದ್ಯಾರ್ಥಿನಿಕುಮಾರಿ ಕ್ಷಮಾ ಇವರು ನಿರ್ವಹಿಸಿದ ಕಾರ್ಯಕ್ರಮದಲ್ಲಿ , ಸುಘೋಷ್ ಸ್ವಾಗತಿಸಿ, ಕುಮಾರಿ ವಂಶಿಕ ವಂದಿಸಿದರು. ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಪರಿಮಳ ಎಂ ವಿ ಇವರ ಮಾರ್ಗದರ್ಶನದಲ್ಲಿ ಮೂಡಿ ಬಂದ ಈ ಕಾರ್ಯಕ್ರಮಕ್ಕೆ ಶಾಲಾ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಸಾಕ್ಷಿಗಳಾದರು.

Related post

Leave a Reply

Your email address will not be published. Required fields are marked *

error: Content is protected !!