• October 13, 2024

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಓಣಂ ಸಂಭ್ರಮ.

 ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಓಣಂ ಸಂಭ್ರಮ.

 

ಧರ್ಮಸ್ಥಳ: ಶ್ರೀ.ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಓಣಂ ನ ಪ್ರಯುಕ್ತ ವಿದ್ಯಾರ್ಥಿಗಳಿಗಾಗಿ ಹೂಗಳ ರಂಗೋಲಿ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಈ ಸ್ಪರ್ಧೆಯನ್ನು ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕವಾಗಿ ನಡೆಸಲಾಗಿತ್ತು. ಸುಮಾರು 25ಕ್ಕೂ ಹೆಚ್ಚು ತಂಡಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

ಬಣ್ಣ ಬಣ್ಣದ ಹೂಗಳ, ಎಲೆಗಳಿಂದ ಹಾಗೂ ಸುಂದರ ದೀಪಗಳಿಂದ ಅಲಂಕೃತವಾಗಿದ್ದ ಹೂವಿನ ರಂಗೋಲಿ ಪೂಕ್ಕಲಂ ಶಾಲೆಯ ಕಾರಿಡಾರಿನ ತುಂಬಾ ಅಲಂಕಾರಗೊಂಡಿತ್ತು. ಅತ್ಯಂತ ಸುಂದರವಾಗಿ ಮೂಡಿ ಬಂದ ಈ ಸ್ಪರ್ಧೆ ಮಕ್ಕಳ ಸೃಜನಶೀಲತೆಗೆ ಹಿಡಿದ ಕೈಗನ್ನಡಿಯಾಗಿತ್ತು. ಶಾಲೆಯ ಸಂಸ್ಕೃತಿಕ ಸಂಘ ಏರ್ಪಡಿಸಿದ್ದ ಈ ಕಾರ್ಯಕ್ರಮಕ್ಕೆ ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳ ಎಂ ವಿ ಪ್ರೋತ್ಸಾಹ ನೀಡಿದರು. ಶಾಲಾ ಶಿಕ್ಷಕರು ಹೆತ್ತವರು ಹಾಗೂ ವಿದ್ಯಾರ್ಥಿಗಳು ಇದರ ಅಂದವನ್ನು ಸವಿದರು.

Related post

Leave a Reply

Your email address will not be published. Required fields are marked *

error: Content is protected !!