ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ವಿಜ್ಞಾನ ದಿನಾಚರಣೆ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅಂಗಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ವಿಜ್ಞಾನ ದಿನಾಚರಣೆಯನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು.
ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಿಯುಸಿ ಕಾಲೇಜು ಉಜಿರೆ ಇಲ್ಲಿನ ಪ್ರಾಧ್ಯಾಪಕರಾಗಿರುವ ಶ್ರೀಯುತ ಸುನಿಲ್ ಪಿ.ಜೆ ಆಗಮಿಸಿದ್ದರು.
ಸರ್ ಸಿ ವಿ ರಾಮನ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮುಖಾಂತರ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ತದನಂತರ ರಾಷ್ಟ್ರೀಯ ವಿಜ್ಞಾನ ದಿನದ ಈ ಸಂದರ್ಭದಲ್ಲಿ ವೈಜ್ಞಾನಿಕ ಮನೋಭಾವ ಮತ್ತು ಮಾನವೀಯ ಮೌಲ್ಯಗಳ ಬಗ್ಗೆ ಪ್ರತಿಜ್ಞೆಯನ್ನು ಸ್ವೀಕರಿಸಲಾಯಿತು. ಬಳಿಕ ಮಾತನಾಡಿದ ಅವರು ವಿಜ್ಞಾನ ಎಂದರೇನು? ವಿಜ್ಞಾನದ ಮೂಲ ಯಾವುದು? ಪ್ರಶ್ನಿಸುವ ಮನೋಭಾವವನ್ನು ಏಕೆ ಹೊಂದಬೇಕು? ಪ್ರಕೃತಿಯನ್ನು ಕುತೂಹಲದಿಂದ ವೀಕ್ಷಿಸಿ, ಮೊಬೈಲ್ ಬಳಸಬೇಡಿ ಏಕೆಂದರೆ ಪ್ರಕೃತಿ ಅತ್ಯುತ್ತಮ ಶಿಕ್ಷಕ ಎಂಬಿತ್ಯಾದಿ ಹಲವು ವಿಚಾರಗಳನ್ನು ಹಲವಾರು ನಿದರ್ಶನಗಳ ಮುಖಾಂತರ ವಿದ್ಯಾರ್ಥಿಗಳಿಗೆ ಮನದಟ್ಟಾಗುವಂತೆ ಅತ್ಯಂತ ಧಾರ್ಮಿಕವಾಗಿ ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಪರಿಮಳ ಎಂ ವಿ ಜ್ಞಾನ ದಿನದ ಮಹತ್ವದ ಕುರಿತು ತಿಳಿಸಿದರು.
ಈ ದಿನ ವಿದ್ಯಾರ್ಥಿಗಳು ತಾವೇ ಸ್ವತಃ ತಯಾರಿಸಿರುವ ಹಲವಾರು ವೈಜ್ಞಾನಿಕ ಮಾದರಿಗಳನ್ನು ಪ್ರದರ್ಶಿಸಿದರು. ವಿದ್ಯಾರ್ಥಿನಿ ಕುಮಾರಿ, ಶ್ರೀನಿಧಿ ನಿರ್ವಹಿಸಿದ ಕಾರ್ಯಕ್ರಮದಲ್ಲಿ ಕುಮಾರಿ ಆದ್ಯ ಸ್ವಾಗತಿಸಿ ಕುಮಾರಿ ವಂಶಿಕ ಅತಿಥಿಗಳ ಕಿರುಪರಿಚಯವನ್ನು ಮಾಡಿ ಕುಮಾರಿ ನಿಧಿಶಾ ಧನ್ಯವಾದ ಇತ್ತರು.
ಶಾಲಾ ವಿದ್ಯಾರ್ಥಿಗಳು ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಈ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಂಡರು.