• June 16, 2024

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಕಿಡ್ಸ್ ಪ್ಯಾರಡೈಸ್ ಉದ್ಘಾಟನೆ

 ಶ್ರೀ  ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಕಿಡ್ಸ್ ಪ್ಯಾರಡೈಸ್ ಉದ್ಘಾಟನೆ


ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಮಕ್ಕಳ ಆಟದ ಮನೆಯಾದ ಕಿಡ್ಸ್ ಪ್ಯಾರಡೈಸ್ ಉದ್ಘಾಟನೆಯನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಹರ್ಷೇಂದ್ರ ಕುಮಾರ್ ಹಾಗೂ ಶ್ರೀಮತಿ ಸುಪ್ರಿಯಾ ಹರ್ಷೇಂದ್ರ ಕುಮಾರ್ ಕಿಡ್ಸ್ ಪ್ಯಾರಡೈಸ್ ಎಂಬ ಹೆಸರಿನ ನಾಮ ಫಲಕ ಅನಾವರಣದೊಂದಿಗೆ ದೀಪ ಬೆಳಗಿಸಿ ಉದ್ಘಾಟಿಸಿದರು.

ತದನಂತರ ಮಾತನಾಡಿದ ಹರ್ಷೇಂದ್ರ ಕುಮಾರ್ ಅವರು ಆಟ ಆಡುವಾಗ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳನ್ನು ವಿವರಿಸಿದರು.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಗಳ ಸಲಹಾ ಸಮಿತಿಯ ಅಧ್ಯಕ್ಷರಾಗಿರುವ ಶ್ರೀಮತಿ ಸುಪ್ರಿಯಾ ಹರ್ಷೇಂದ್ರ ಕುಮಾರ್ ಅವರು ಮಕ್ಕಳ ಜೊತೆಗೆ ಮಗುವಾಗಿ ಸಂತಸದಿಂದ ಅವರ ಆಟವನ್ನು ಗಮನಿಸುತ್ತಾ ಅವರನ್ನು ಮಾತನಾಡಿಸಿ ಸಂತಸ ವ್ಯಕ್ತಪಡಿಸಿ ಶುಭ ಹಾರೈಸಿದರು.

ಶಾಲಾ ಮುಖೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಬಂದಂಥ ಅತಿಥಿಗಳನ್ನು ಸ್ವಾಗತಿಸಿದರು. ಡಿಎಂಸಿಯ ಮುಖ್ಯ ಇಂಜಿನಿಯರ್ ಆಗಿರುವ ಶ್ರೀಯುತ ಯಶೋಧರ್ ಈ ಉದ್ಘಾಟನಾ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಶಾಲಾ ಶಿಕ್ಷಕ ವೃಂದ ಶಿಕ್ಷಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಈ ಕಾರ್ಯಕ್ರಮಕ್ಕೆ ಸಾಕ್ಷಿಗಳಾದರು.

Related post

Leave a Reply

Your email address will not be published. Required fields are marked *

error: Content is protected !!