ಎಪ್ರಿಲ್ 2 : ಬಿಜೆಪಿ ಕಾರ್ಯಕರ್ತರ ಸಮಾವೇಶ
ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಮಂಡಲ ಪದಾಧಿಕಾರಿಗಳ, ವಿವಿಧ ಮೋರ್ಚಾಗಳ, ಮಹಾಶಕ್ತಿಕೇಂದ್ರ, ಶಕ್ತಿಕೇಂದ್ರ ಹಾಗೂ ಬೂತ್ ಸಮಿತಿ ಪದಾಧಿಕಾರಿಗಳ ಪದಗ್ರಹಣ ಹಾಗೂ ಕಾರ್ಯಕರ್ತರ ಸಮಾವೇಶ ನಾಳೆ ಎಪ್ರಿಲ್ 2 ರಂದು ಬೆಳಿಗ್ಗೆ 10-00 ಗಂಟೆಗೆ ಗುರುವಾಯನಕೆರೆ ಕಿನ್ಯಮ್ಮ ಯಾನೆ ಗುಣವತಿಯಮ್ಮ ಸಭಾಭವನದಲ್ಲಿ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲ್, ಮಂಗಳೂರು ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ, ರಾಜ್ಯ ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ,ಶಾಸಕ ಹರೀಶ್ ಪೂಂಜ, ವಿಧಾನಪರಿಷತ್ ಸದಸ್ಯ ಪ್ರತಾಪಸಿoಹ ನಾಯಕ್, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಸೇರಿದಂತೆ ರಾಜ್ಯ ಹಾಗೂ ಜಿಲ್ಲೆಯ ಪ್ರಮುಖರು ಭಾಗವಹಿಸಲಿದ್ದಾರೆ. ಎಂದು ಬಿಜೆಪಿ ಮಂಡಲಾಧ್ಯಕ್ಷ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಜಯಾನಂದ ಗೌಡ, ಪ್ರಶಾಂತ್ ಪಾರೆಂಕಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ