• July 27, 2024

ಕಳೆಂಜದಲ್ಲಿ ನಡೆದ ಹಲ್ಲೆ ಪ್ರಕರಣ: ಮನೆಯ ಆವರಣದೊಳಗೆ ನುಗ್ಗಿ ಪಟಾಕಿ ಸಿಡಿಸಿ ಸಂಭ್ರಮಿಸಿರುವುದನ್ನು ಖಂಡಿಸಿದ ಕಾಂಗ್ರೆಸ್ ನಾಯಕರು: ಸುದ್ದಿಗೋಷ್ಠಿ

 ಕಳೆಂಜದಲ್ಲಿ ನಡೆದ ಹಲ್ಲೆ ಪ್ರಕರಣ: ಮನೆಯ ಆವರಣದೊಳಗೆ ನುಗ್ಗಿ ಪಟಾಕಿ ಸಿಡಿಸಿ ಸಂಭ್ರಮಿಸಿರುವುದನ್ನು ಖಂಡಿಸಿದ ಕಾಂಗ್ರೆಸ್ ನಾಯಕರು: ಸುದ್ದಿಗೋಷ್ಠಿ

ಬೆಳ್ತಂಗಡಿ: ಕಳೆಂಜ ಗ್ರಾಮದಲ್ಲಿ ಬಿಜೆಪಿ ವಿಜಯೋತ್ಸವ ಸಂದರ್ಭದಲ್ಲಿ ಕುಶಾಲಪ್ಪ ಗೌಡ ರ ಮನೆಯ ಆವರಣದೊಳಗೆ ಬಿಜೆಪಿ ಕಾರ್ಯಕರ್ತ ರಾಜೇಶ್ ನುಗ್ಗಿ ಸುಡುಮದ್ದು ಸಿಡಿಸಿ ಮನೆಯಲ್ಲಿದ್ದ ಮಹಿಳೆಯರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ದೌರ್ಜನ್ಯ ಎಸಗಿರುವುದು ಖಂಡನೀಯ ಎಂದು ಎಸ್ ಸಿ ಘಟಕದ ಜಿಲ್ಲಾ ಅಧ್ಯಕ್ಷ ಜಿ.ಪಂ ಮಾಜಿ ಸದಸ್ಯ ಶೇಖರ ಕುಕ್ಕೇಡಿ ಮತ್ತು ಎಸ್ ಸಿ ಘಟಕದ ಗ್ರಾಮೀಣ ಅಧ್ಯಕ್ಷ ನೇಮಿರಾಜ ಕಿಲ್ಲೂರು ಹೇಳಿದರು.

ಅವರು ಬ್ಲಾಕ್ ಕಾಂಗ್ರೆಸ್ ಕಚೇರಿ ಸಂತೆಕಟ್ಟೆ ಇಲ್ಲಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಈ ಘಟನೆಯ ವೇಳೆ ಮಾತಿಗೆ ಮಾತು ಬೆಳೆದು ತನ್ನ ಕುಟುಂಬದ ರಕ್ಷಣೆಗಾಗಿ ಕುಶಾಲಪ್ಪ ಗೌಡ ಪ್ರತಿರೋಧವನ್ನು ತೋರಿದ್ದು, ಈ ವೇಳೆ ರಾಜೇಶ್ ಗೆ ಗಾಯಗಳಾಗಿವೆ. ಈ ಘಟನೆಯಲ್ಲಿ ಅಪ್ರಾಪ್ತ ಹೆಣ್ಣು ಮಗಳಿಗೆ ದೌರ್ಜನ್ಯ ಎಸಗಿರುವುದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದು ಹೇಳಿದರು.

Related post

Leave a Reply

Your email address will not be published. Required fields are marked *

error: Content is protected !!