ಕುಪ್ಪೆಟ್ಟಿ ವಲಯ ಮಟ್ಟದ ಪ್ರತಿಭಾ ಕಾರಂಜಿ
ಬಂದಾರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಬೆಳ್ತಂಗಡಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಬೆಳ್ತಂಗಡಿ, ಸಮೂಹ ಸಂಪನ್ಮೂಲ ಕೇಂದ್ರ ಕುಪ್ಪೆಟ್ಟಿ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಂಟಾಲಪಲ್ಕೆ ಇವರ ಸಹಯೋಗದೊಂದಿಗೆ ಕುಪ್ಪೆಟ್ಟಿ ವಲಯ ಮಟ್ಟದ ಸುಮಾರು 16 ಶಾಲೆಗಳ ವಿದ್ಯಾರ್ಥಿಗಳ ‘ವಲಯ ಮಟ್ಟದ ಪ್ರತಿಭಾಕಾರಂಜಿ ಸ್ಪರ್ಧೆ ಕುಂಟಾಲಪಲ್ಕೆ ಶಾಲೆಯಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಪರಮೇಶ್ವರಿ ಕೆ,’ ಇಂತಹ ವೇದಿಕೆಗಳು ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರತೆಗೆಯಲು ಸಹಕಾರಿ,ಎಲ್ಲಾ ಪೋಷಕರು ಮಕ್ಕಳಿಗೆ ಇಂತಹ ಕಾರ್ಯಕ್ರಮ ಗಳಿಗೆ ಭಾಗವಹಿಸಲು ಪ್ರೋತ್ಸಾಹ ನೀಡಬೇಕು.ಬಹುಮಾನಕ್ಕಿಂತ ಭಾಗವಹಿಸುವಿಕೆ ಮುಖ್ಯ’ ಎಂದರು.
ಕಾರ್ಯಕ್ರಮದಲ್ಲಿ ಶಾಲೆಗೆ ವಿವಿಧ ರೀತಿಯ ಕೊಡುಗೆಗಳನ್ನು ನೀಡಿದ ನಿಕಟಪೂರ್ವ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಶ್ರೀ ರಾಮಣ್ಣ ಗೌಡ ನೆಲ್ಲಿಗೇರು, ಎಸ್.ಡಿ.ಎಂ.ಸಿ.ಸದಸ್ಯರಾದ ಶ್ರೀ ಧರ್ಣಪ್ಪಗೌಡ ಹಳೆಮನೆ,ಬಂದಾರು ಗ್ರಾ.ಪಂ.ಸದಸ್ಯೆ ಶ್ರೀಮತಿ ಭಾರತಿ ಕೋಡ್ಯೇಲು, ನಿವೃತ್ತ ಸೈನಿಕರಾದ ಶ್ರೀ ರಮೇಶ್ ಕೆ,ಪದ್ಮುಂಜ ಸೇವಾ ಸಹಕಾರಿ ಸಂಘ(ನಿ) ದ ಅಧ್ಯಕ್ಷರಾದ ರಕ್ಷಿತ್ ಪಣಿಕ್ಕರ ರನ್ನು ಶಾಲಾ ಪರವಾಗಿ ಗೌರವಿಸಲಾಯಿತು.
ಇದೇ ಸಂದರ್ಭದಲ್ಲಿ ಈ ಬಾರಿಯ ‘ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ’ ಪ್ರಶಸ್ತಿಗೆ ಆಯ್ಕೆಯಾದ ಕ್ಲಸ್ಟರ್ ನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ನೆಕ್ಕಿಲು ಇಲ್ಲಿನ ಮುಖ್ಯೋಪಾಧ್ಯಾಯರಾದ ಶ್ರೀ ಬಿ.ಎಸ್.ಬಿರಾದಾರ್ ರವರನ್ನು ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ಬಂದಾರು ಗ್ರಾಮ ಪಂಚಾಯತ್ ನ ಉಪಾಧ್ಯಕ್ಷರಾದ ಶ್ರೀ ಗಂಗಾಧರ ಪೂಜಾರಿ,ಸದಸ್ಯರಾದ ಶ್ರೀ ಮೋಹನ್ ಗೌಡ ಕೋಡ್ಯೇಲು,ಶ್ರೀಮತಿ ಅನಿತಾ ಕುರುಡಂಗೆ ,ಪುತ್ತಿಲ ಸಿ.ಆರ್.ಪಿ. ದಿನೇಶ್ ನಾಯಕ್ ಉಪಸ್ಥಿತರಿದ್ದರು.
ಶಾಲಾ ಎಸ್.ಡಿ..ಎಂ.ಸಿ .ಅಧ್ಯಕ್ಷರಾದ ಶ್ರೀ ಬಾಲಕೃಷ್ಣ ಗೌಡ ಅಧ್ಯಕ್ಷತೆ ವಹಿಸಿದ್ದರು.ಕುಪ್ಪೆಟ್ಟಿ ವಲಯದ ಸಿ.ಆರ್.ಪಿ.ಶ್ರೀ ಮಹಮ್ಮದ್ ಶರೀಫ್ ಕೆ.ಪಿ.ಪ್ರಸ್ತಾವನೆಗೈದರು.
ಶಾಲಾ ಮುಖ್ಯೋಪಾಧ್ಯಾಯರಾದ ಸುರೇಶ್ ಮಾಚಾರ್ ಎಲ್ಲರನ್ನು ಸ್ವಾಗತಿಸಿದರು. ಶಾಲಾ ಅತಿಥಿ ಶಿಕ್ಷಕಿ ಹರಿಣಾಕ್ಷಿ ಎನ್ ನಿರೂಪಿಸಿದ ಕಾರ್ಯಕ್ರಮದಲ್ಲಿ,ಶಾಲಾ ಪದವೀಧರ ಶಿಕ್ಷಕಿ ಶ್ರೀಮತಿ ಗಾಯತ್ರಿ ಕೆ ವಂದಿಸಿದರು.ಶಾಲಾ ಜ್ಞಾನ ದೀಪ ಶಿಕ್ಷಕಿ ರೇಷ್ಮಾ ,ಅಂಗನವಾಡಿ ಶಿಕ್ಷಕಿ ಶ್ರೀಮತಿ ಚೇತನಾ ಸಹಕರಿಸಿದರು.