ಬೆಳ್ತಂಗಡಿ :ಬಿಜೆಪಿ ಬೆಳ್ತಂಗಡಿ ಸದಸ್ಯತ್ವ ಅಭಿಯಾನ ಕಾರ್ಯಾಗಾರ
ಬೆಳ್ತಂಗಡಿ :ಬಿಜೆಪಿ ಬೆಳ್ತಂಗಡಿ ಸದಸ್ಯತ್ವ ಅಭಿಯಾನ ಕಾರ್ಯಾಗಾರ
ಆ 30 ರಂದು ಬಿಜೆಪಿ ಕಚೇರಿಯಲ್ಲಿ ನಡೆಯಿತು.
ಬೆಳ್ತಂಗಡಿ ಮಂಡಲ ಬಿಜೆಪಿ ಅಧ್ಯಕ್ಷರಾದ ಶ್ರೀನಿವಾಸ್ ರಾವ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಡಲದ ಉಸ್ತುವಾರಿ ಕಿಶೋರ್ ಕುಮಾರ್ ಪುತ್ತೂರು ಮಾಹಿತಿ ನೀಡಿದರು. ದೇವದಾಸ್ ಶೆಟ್ಟಿ ಸದಸ್ಯತಾ ಅಭಿಯಾನ ಮಾಹಿತಿ ನೀಡಿದರು. ಪ್ರದರ್ಶನ ಮಾಹಿತಿಯನ್ನು ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ನೀಡಿದರು.
ಜಿಲ್ಲಾ ಕಾರ್ಯದರ್ಶಿ ವಸಂತಿ ಮಚ್ಚಿನ ಉಪಸ್ಥಿತರಿದ್ದರು. ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ ಸ್ವಾಗತಿಸಿದರು. ಮಂಡಲ ಸಂಚಾಲಕರು ಯೋಗೀಶ್, ದಿನಕರ್ ಕುಲಾಲ್ ಉಪಸ್ಥಿತರಿದ್ದರು.