ರಾಜ್ಯ ಸರ್ಕಾರದ ಲೋಕೋಪಯೋಗಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಎಸ್ ಸೆಲ್ವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಬ್ರಿಜೇಶ್ ಚೌಟ
ರಾಜ್ಯ ಸರ್ಕಾರದ ಲೋಕೋಪಯೋಗಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಎಸ್ ಸೆಲ್ವಕುಮಾರ್ ಅವರನ್ನು ಇಂದು ಮಂಗಳೂರು ಸಂಸದರಾದ ಬ್ರಿಜೇಶ್ ಚೌಟ ರವರು ಬೆಂಗಳೂರಿನಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು.
ಈ ವೇಳೆ ದಕ್ಷಿಣಕನ್ನಡ ಜಿಲ್ಲೆಯ ವಿವಿಧ ಮೂಲಸೌಕರ್ಯ ಅಭಿವೃದ್ದಿಗಳ ಬಗ್ಗೆ ಚರ್ಚಿಸಿದರು.
ಪ್ರಮುಖವಾಗಿ ಮಂಗಳೂರು-ಬೆಂಗಳೂರು ನಡುವಿನ ಸಂಪರ್ಕ ಮತ್ತಷ್ಟು ಸುಗಮಗೊಳಿಸುವುದು, ಮಾಣಿ-ಸಂಪಾಜೆ ರಸ್ತೆ ಮೇಲ್ದರ್ಜೆ ಕಾಮಗಾರಿ ಕುರಿತ ವಿಸ್ತೃತ ಯೋಜನಾ ವರದಿ (ಡಿಪಿಆರ್) ಹಾಗೂ ಇತರ ವಿಚಾರಗಳ ಕುರಿತು ಸಮಾಲೋಚಿಸಿದರು.