ಉನ್ನತ ಶಿಕ್ಷಣ ಸಚಿವ ಡಾ.ಎಂ ಸಿ ಸುಧಾಕರ್ ಅವರನ್ನು ಭೇಟಿ ನೀಡಿದ ಶಾಸಕ ಹರೀಶ್ ಪೂಂಜ: ವೇಣೂರಿನಲ್ಲಿ ಪ್ರಥಮ ದರ್ಜೆ ಕಾಲೇಜನ್ನು ಆರಂಭಿಸಲು ಮನವಿ
ಕರ್ನಾಟಕ ರಾಜ್ಯ ಸರ್ಕಾರದ ಮಾನ್ಯ ಉನ್ನತ ಶಿಕ್ಷಣ ಸಚಿವರಾದ ಡಾ. ಎಂ ಸಿ ಸುಧಾಕರ್ ಅವರನ್ನು ಶಾಸಕ ಹರೀಶ್ ಪೂಂಜರವರು ಭೇಟಿಯಾಗಿ ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ಪ್ರಥಮ ದರ್ಜೆ ಕಾಲೇಜನ್ನು ಆರಂಭಿಸಲು ಮನವಿ ಸಲ್ಲಿಸಿದರು.
ಪುಂಜಾಲಕಟ್ಟೆ ಹಾಗೂ ಬೆಳ್ತಂಗಡಿ ಪ್ರಥಮ ದರ್ಜೆ ಕಾಲೇಜಿನ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಅನುದಾನವನ್ನು ಒದಗಿಸುವಂತೆ ಮನವಿ ಮಾಡಿದರು.