• October 16, 2024

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಯಲ್ಲಿ ಹಿಂದಿ ದಿವಸ ಕಾರ್ಯಕ್ರಮ

 ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಯಲ್ಲಿ ಹಿಂದಿ ದಿವಸ ಕಾರ್ಯಕ್ರಮ

 


ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿಂದಿ ದಿವಸ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದ ಹಿಂದಿ ಶಿಕ್ಷಕಿ ಶ್ರೀಮತಿ ಮಮತಾ ಎನ್ ಹೊಳ್ಳ ಆಗಮಿಸಿ, ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಹಿಂದಿ ದಿವಸದ ಮಹತ್ವ, ಹಿಂದಿ ಭಾಷೆಯನ್ನು ಉಳಿಸಿ ಬೆಳೆಸುವುದು ಅದಕ್ಕೆ ನಮ್ಮೆಲ್ಲರ ಸಹಕಾರ ಮತ್ತು ಶ್ರಮ ಅಗತ್ಯವಿದೆ ಎಂದು ಮಕ್ಕಳನ್ನು ಉದ್ದೇಶಿಸಿ ಮಾತನಾಡಿದರು.

ಹಿಂದಿ ಭಾಷಣ, ಹಿಂದಿ ಗೀತ ಗಾಯನ, ಹಿಂದಿ ಕಥೆ ರಚನೆಯ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಹತ್ತನೇ ತರಗತಿಯ ಯಶಸ್ ಡಿ ನಿರೂಪಣೆಯನ್ನು ಮಾಡಿದರು 9ನೇ ತರಗತಿಯ ಅನಘ ಸ್ವಾಗತಿಸಿ, ಕುಮಾರಿ ಯಶ್ವಿ ಅತಿಥಿಗಳನ್ನು ಪರಿಚಯಿಸಿ, ಕುಮಾರಿ ಹ್ಯಾಪಿ ವಂದಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಹೇಮಲತಾ ಎಂ ಆರ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಹಿಂದಿ ಶಿಕ್ಷಕಿಯರಾದ ಮೆನಿತ ಕೆಎಂ ಮತ್ತು ಮಂಜುನಾಥ್ ರೂಪುಗೊಳಿಸಿದ ಕಾರ್ಯಕ್ರಮದಲ್ಲಿ ಶಿಕ್ಷಕಿ ಸುಮಲತರವರು ತಮ್ಮ ಸಹಕಾರವನ್ನು ನೀಡಿದರು. ಈ ಕಾರ್ಯಕ್ರಮದಲ್ಲಿ ಹಿಂದಿ ಭಾಷೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

Related post

Leave a Reply

Your email address will not be published. Required fields are marked *

error: Content is protected !!