• October 18, 2024

ಮಲವಂತಿಗೆ: ಅಕ್ರಮ ಗೋ ಸಾಗಾಟ: 4 ಮಂದಿ ಆರೋಪಿಗಳು ಪೊಲೀಸ್ ವಶ

 ಮಲವಂತಿಗೆ: ಅಕ್ರಮ ಗೋ ಸಾಗಾಟ: 4 ಮಂದಿ ಆರೋಪಿಗಳು ಪೊಲೀಸ್ ವಶ

 

ಬೆಳ್ತಂಗಡಿ; ಮಲವಂತಿಗೆಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಗೋ ಸಾಗಾಟವನ್ನು ಸ್ಥಳೀಯರ ಸಹಕಾರದೊಂದಿಗೆ ಪತ್ತೆಹಚ್ಚಿದ ಬೆಳ್ತಂಗಡಿ ಪೊಲೀಸರು ಎರಡು ಪಿಕಪ್ ವಾಹನಗಳನ್ನು ಹಾಗೂ ಐದು ದನಗಳನ್ನು ವಶಪಡಿಸಿಕೊಂಡು ನಾಲ್ಕು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.ಬಂಧಿತ ಆರೋಪಿಗಳು ಚಿಬಿದ್ರೆ ಗ್ರಾಮದ ಪೆರಿಯಡ್ಕ ನಿವಾಸಿ ಯತೀಂದ್ರ(24), ತೋಟತ್ತಾಡಿ ಗ್ರಾಮದ ಬೆಂದ್ರಾಳ ನಿವಾಸಿ ಅರವಿಂದ(30), ಚಾರ್ಮಾಡಿ ಗ್ರಾಮದ ಉಸ್ಮಾನ್ ( 36) ಮತ್ತು ಚಿಬಿದ್ರೆ ಗ್ರಾಮದ ಆರಿಫ್ (27) ಎಂಬವರಾಗಿದ್ದಾರೆ.ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಎಳನೀರು ದಿಡುಪೆ ರಸ್ತೆಯಲ್ಲಿ ಗುರುವಾರ ರಾತ್ರಿ ವೇಳೆ ಅಕ್ರಮವಾಗಿ ಪಿಕಪ್ ವಾಹನದಲ್ಲಿ ದನಗಳನ್ನು ಸಾಗಾಟ ಮಾಡುತ್ತಿದ್ದ ಖಚಿತ ಮಾಹಿತಿಯ ಆಧಾರದಲ್ಲಿ ಬೆಳ್ತಂಗಡಿ ಪೊಲೀಸರು ಮಲವಂತಿಗೆ ಗ್ರಾಮದ ಕಜಕೆ ಎಂಬಲ್ಲಿ ಎಳನೀರು ಕಡೆಯಿಂದ ಬರುತ್ತಿದ್ದ ಪಿಕಪ್ ವಾಹನಗಳನ್ನು ತಡೆದು ಪರಿಶೀಲನೆ ನಡೆಸಿದಾಗ ಎರಡು ಪಿಕಪ್ ವಾಹನಗಳಲ್ಲಿ ಐದು ದನಗಳನ್ನು ಸಾಗಾಟ ಮಾಡುತ್ತಿರುವುದು ಕಂಡು ಬಂದಿದೆ. ವಾಹನದಲ್ಲಿ ಇದ್ದವರ ಬಳಿ ದನಗಳ ಸಾಗಾಟಕ್ಕೆ ಯಾವುದೇ ಪರವಾನಿಗೆಗಳು ಇಲ್ಲದಿರುವುದು ಕಂಡು ಬಂದಿದೆ.ಈ ಹಿನ್ನಲೆಯಲ್ಲಿ ದನಗಳನ್ನು ಮಾಂಸ ಮಾಡುವ ಉದ್ದೇಶದಿಂದ ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿರುವ ಬಗ್ಗೆ ಅನುಮಾನ ವ್ಯಕ್ತವಾಗಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಆರೋಪಿಗಳನ್ನು ಬಂಧಿಸಿ ಕೆ.ಎ 70- 5197 ನಂಬರ್ ನ ಹಾಗೂ ಕೆ.ಎ 18 B 4918 ನಂಬರ್ ನ ಎರಡು ಪಿಕಪ್ ವಾಹನಗಳನ್ನು ಹಾಗೂ ಐದು ದನಗಳನ್ನು ವಶಕ್ಕೆ ಪಡೆದುಕೊಂಡು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related post

Leave a Reply

Your email address will not be published. Required fields are marked *

error: Content is protected !!