• November 13, 2024

*ಶಬರಿಮಲೆಗೆ ಆನ್ ಲೈನ್ ಬುಕ್ಕಿಂಗ್ ಕಡ್ಡಾಯ: ಒಂದು ದಿನದಲ್ಲಿ ಗರಿಷ್ಠ 80,000 ಮಂದಿಗೆ ಮಾತ್ರ ಅಯ್ಯಪ್ಪನ ದರ್ಶನಕ್ಕೆ ಅವಕಾಶ ನೀಡಲು ನಿರ್ಧಾರ*

 *ಶಬರಿಮಲೆಗೆ ಆನ್ ಲೈನ್ ಬುಕ್ಕಿಂಗ್ ಕಡ್ಡಾಯ: ಒಂದು ದಿನದಲ್ಲಿ ಗರಿಷ್ಠ 80,000 ಮಂದಿಗೆ ಮಾತ್ರ ಅಯ್ಯಪ್ಪನ ದರ್ಶನಕ್ಕೆ ಅವಕಾಶ ನೀಡಲು ನಿರ್ಧಾರ*

 

ತಿರುವನಂತಪುರಂ ಅಕ್ಟೋಬರ್ 06: ಶಬರಿಮಲೆ ಯಾತ್ರೆಯ ಋತು ಪ್ರಾರಂಭವಾಗಲಿದ್ದು, ಈ ಹಿನ್ನಲೆ ಸಿಎಂ ನೇತೃತ್ವದಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆಸಲಾಗಿದ್ದು, ಈ ಬಾರಿ ಶಬರಿಮಲೆಗೆ ಆನ್‌ಲೈನ್ ಬುಕ್ಕಿಂಗ್‌ಗೆ ಮಾತ್ರ ಅವಕಾಶ ನೀಡಲು ನಿರ್ಧರಿಸಲಾಗಿದೆ. ಒಂದು ದಿನದಲ್ಲಿ ಗರಿಷ್ಠ 80,000 ಮಂದಿಗೆ ಮಾತ್ರ ಅಯ್ಯಪ್ಪನ ದರ್ಶನಕ್ಕೆ ಅವಕಾಶ ನೀಡಲು ನಿರ್ಧರಿಸಲಾಗಿದೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅಧ್ಯಕ್ಷತೆಯಲ್ಲಿ ನಡೆದ ಶಬರಿಮಲೆ ಮಂಡಲ-ಮಕರವಿಳಕ್ ಮಹೋತ್ಸವದ ಪರಿಶೀಲನಾ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ವರ್ಚುವಲ್ ಕ್ಯೂ ಬುಕಿಂಗ್ ಸಮಯದಲ್ಲಿ ಪ್ರಯಾಣದ ಮಾರ್ಗವನ್ನು ಆಯ್ಕೆ ಮಾಡಲು ಅವಕಾಶವನ್ನು ನೀಡಲಾಗುತ್ತದೆ. ಹೀಗಾಗಿ ಯಾತ್ರಿಕರು ಕಡಿಮೆ ದಟ್ಟಣೆಯ ಮಾರ್ಗವನ್ನು ಆಯ್ಕೆ ಮಾಡಬಹುದು. ಕಾನನ ಮಾರ್ಗದಲ್ಲಿ ಬರುವ ಭಕ್ತರಿಗೆ ಅಗತ್ಯ ಸೌಲಭ್ಯ ಕಲ್ಪಿಸಲಾಗುವುದು. ಜನದಟ್ಟಣೆ ಇರುವ ಸಮಯದಲ್ಲಿ ವಾಹನಗಳನ್ನು ನಿಯಂತ್ರಿಸಬೇಕಾದರೆ ಕೇಂದ್ರಗಳನ್ನು ಗುರುತಿಸಿ ಅಗತ್ಯ ಮೂಲಸೌಕರ್ಯ ಕಲ್ಪಿಸಲಾಗುವುದು ನಿಲಕ್ಕಲ್ ಮತ್ತು ಎರುಮೇಲಿಯಲ್ಲಿ ವಾಹನ ನಿಲುಗಡೆಗೆ ಹೆಚ್ಚಿನ ಸೌಲಭ್ಯ ಕಲ್ಪಿಸಲಾಗುತ್ತಿದೆ. ಶಬರಿಮಲೆಗೆ ಹೋಗುವ ರಸ್ತೆಗಳು ಮತ್ತು ಪಾರ್ಕಿಂಗ್ ಮೈದಾನಗಳ ದುರಸ್ತಿ ಕಾರ್ಯಗಳು ಶೀಘ್ರದಲ್ಲೇ ಪೂರ್ಣಗೊಳ್ಳಲಿವೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅಧ್ಯಕ್ಷತೆಯಲ್ಲಿ ನಡೆದ ಶಬರಿಮಲೆ ಮಂಡಲ-ಮಕರವಿಳಕ ಮಹೋತ್ಸವದ ಪರಿಶೀಲನಾ ಸಭೆಯಲ್ಲಿ ಈ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.

Related post

Leave a Reply

Your email address will not be published. Required fields are marked *

error: Content is protected !!