• December 8, 2024

ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಪ್ರಚಾರ ಅಂಗವಾಗಿ ಮತದಾರರ ಬೃಹತ್ ಸಮಾವೇಶ

 ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಪ್ರಚಾರ ಅಂಗವಾಗಿ ಮತದಾರರ ಬೃಹತ್ ಸಮಾವೇಶ

Oplus_131072

 

ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಪ್ರಚಾರದ ಅಂಗವಾಗಿ ದರೋಜಿ ಗ್ರಾಮದಲ್ಲಿ ಆಯೋಜಿಸಿದ್ದ ಮತದಾರರ ಬೃಹತ್ ಸಮಾವೇಶದಲ್ಲಿ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರೊಂದಿಗೆ ಭಾಗವಹಿಸಿದರು.ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ, ಮುಡಾ ಹಗರಣ ಸೇರಿದಂತೆ ಭ್ರಷ್ಟಾಚಾರದಲ್ಲಿ ಮುಳುಗಿ ಜನಕಲ್ಯಾಣ ಮರೆತಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ತಕ್ಕಪಾಠ ಕಲಿಸುವ ಸದಾವಕಾಶ ಬಂದೊದಗಿದ್ದು ಸಂಡೂರಿನ ಸಮಗ್ರ ಅಭಿವೃದ್ಧಿಗಾಗಿ ನಮ್ಮ ಎನ್.ಡಿ.ಎ ನೇತೃತ್ವದ ಬಿಜೆಪಿ ಅಭ್ಯರ್ಥಿ ಶ್ರೀ ಬಂಗಾರು ಹನುಮಂತು ಅವರನ್ನು ದಾಖಲೆಯ ಮತಗಳ ಅಂತರಗಳಿಂದ ಆಶೀರ್ವದಿಸಬೇಕೆಂದು ಕಿಶೋರ್ ಕುಮಾರ್ ಅವರು ಮನವಿ ಮಾಡಿಕೊಂಡರು. ಈ ಸಂದರ್ಭದಲ್ಲಿ ಅಭ್ಯರ್ಥಿ ಶ್ರೀ ಬಂಗಾರು ಹನುಮಂತು, ಮಾಜಿ ಸಚಿವರಾದ ಶ್ರೀ ಗಾಲಿ ಜನಾರ್ದನ ರೆಡ್ಡಿ , ಶ್ರೀ ರಾಮುಲು ,ಶ್ರೀ ಅರಗ ಜ್ಞಾನೇಂದ್ರ , ಶಾಸಕರಾದ ಶ್ರೀ ಡಾ. ಎಂ ಚಂದ್ರಪ್ಪ , ರಾಜ್ಯ ಕಾರ್ಯದರ್ಶಿ ಶ್ರೀ ದಿವಾಕರ್, ಜಿಲ್ಲಾಧ್ಯಕ್ಷರಾದ ಶ್ರೀ ಅನಿಲ್ ಕುಮಾರ್ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Related post

Leave a Reply

Your email address will not be published. Required fields are marked *

error: Content is protected !!