• December 8, 2024

ಡ್ರೀಮ್ ಡೀಲ್ ಲಕ್ಕಿ ಡ್ರಾ ಕುರಿತ ವೀಡಿಯೋ ವೈರಲ್: ಡ್ರೀಮ್ ಡೀಲ್ ಗ್ರೂಪ್ ವತಿಯಿಂದ ಸುದ್ದಿಗೋಷ್ಠಿ, ಸ್ಪಷ್ಟತೆ

 ಡ್ರೀಮ್ ಡೀಲ್ ಲಕ್ಕಿ ಡ್ರಾ ಕುರಿತ ವೀಡಿಯೋ ವೈರಲ್: ಡ್ರೀಮ್ ಡೀಲ್ ಗ್ರೂಪ್ ವತಿಯಿಂದ ಸುದ್ದಿಗೋಷ್ಠಿ, ಸ್ಪಷ್ಟತೆ

 

ಮಂಗಳೂರು: ಡ್ರೀಮ್ ಡೀಲ್ ಗ್ರೂಪ್ ಮಂಗಳೂರು ವತಿಯಿಂದ ಪ್ರತೀ ತಿಂಗಳು ಪ್ರಮೋಷನ್ ಗಾಗಿ ಗಿಫ್ಟ್ ನೀಡುತ್ತೇವೆ.. ಇತ್ತೀಚೆಗೆ ಲಕ್ಕಿ ಡ್ರಾ ವೇಳೆ ಉಬೈದ್ ಮತ್ತು ಹರ್ಷಿತ್ ಅನ್ನುವ ನಮ್ಮ ಕೆಲಸದವರು ಸಂಸ್ಥೆ ಗೆ ಮೋಸ ಮಾಡಿದ್ದಾರೆ. ಇದು ಗಮನಕ್ಕೆ ಬಂದ ತಕ್ಷಣವೇ ಮರು ಡ್ರಾ ಮಾಡಿದ್ದೇವೆ. ಬಳಿಕ ಅವರ ವಿರುದ್ಧ ಕಂಕನಾಡಿ ಪೋಲೀಸ್ ಠಾಣೆಗೆ ದೂರು ನೀಡಿದ್ದೇವೆ.ಅವರು ತಮ್ಮ ತಪ್ಪನ್ನು ಒಪ್ಪಿಜೊಂಡಿದ್ದಾರೆ. ಕಂಪೆನಿ ಮುಂದೆಯೂ ಜನರ ವಿಶ್ವಾಸಕ್ಕೆ ಬದ್ಧವಾಗಿದೆ. ಪೊಲೀಸ್ ಅಧಿಕಾರಿಗಳು ಈ ನಿಟ್ಟಿನಲ್ಲಿ ತನಿಖೆ ನಡೆಸುತ್ತಿದ್ದಾರೆ. ಎಂದು ಡ್ರೀಮ್ ಡೀಲ್ ಗ್ರೂಪ್ ನ ಆಡಳಿತ ನಿರ್ದೇಶಕ ಸುಹೈಲ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು ಡ್ರೀಮ್ ಡೀಲ್ ಸಂಸ್ಥೆಯು ಆರ್ ಬಿಐ ನಿಯಮಗಳ ಅನ್ವಯ ಕಾರ್ಯನಿರ್ವಹಿಸುತ್ತಿದೆ. ರಾಜ್ಯದಲ್ಲಿ 20000 ಕ್ಕೂ ಅಧಿಕ ಮಂದಿ ಗ್ರಾಹಕರಿದ್ದಾರೆ. ಗ್ರಾಹಕರಿಗೆ ಪ್ರತೀ ತಿಂಗಳು 1000 ಪಾವತಿ ಮಾಡಿದರೆ ಅವರಿಗೆ ಕೂಪನ್ ನೀಡಲಾಗುತ್ತದೆ. ಲಕ್ಕಿ ಡ್ರಾ ಮೂಲಕ ಆಯ್ಕೆಯಾಗುವ ಗ್ರಾಹಕರಿಗೆ ಮಹಿಂದ್ರಾ ಥಾರ್ ಮತ್ತಿತರ ಉಡುಗೊರೆಗಳನ್ನು ಸಂಸ್ಥೆ ನೀಡುತ್ತಾ ಬಂದಿದೆ. ಡ್ರಾ ಸಂದರ್ಭದಲ್ಲಿ ಯ್ಯೂಟ್ಯೂಬ್ ಲೈವ್ ಇದ್ದರೂ ಸಂಸ್ಥೆಯ ಇಬ್ಬರು ಕೆಸಗಾರರು ಬೇರೊಂದು ಚೀಟಿಯನ್ನು ಉದ್ದೇಶಪೂರ್ವಕವಾಗಿ ಅದರಲ್ಲಿ ಹಾಕಿದ್ದಾರೆ.ಆದರೆ ಆ ನಂಬರ್ ಎತ್ತಿ ಡ್ರಾ ಮಾಡಲಾಗಿಲ್ಲ.ಸಂಸ್ಥೆಯು ಗ್ರಾಹಕರ ಹಿತದೃಷ್ಟಿಯಿಂದ ಇಬ್ಬರಿಗೆ ಲಕ್ಕಿ ಡ್ರಾ ಮಾಡಿದೆ.ಸಂಸ್ಥೆಗೆ ಗ್ರಾಹಕರು ಮುಖ್ಯ ಎಂದರು.

Related post

Leave a Reply

Your email address will not be published. Required fields are marked *

error: Content is protected !!