• January 16, 2025

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ವತಿಯಿಂದ ಮಾಧ್ಯಮ ಮಿತ್ರರೊಂದಿಗೆ ಕ್ರಿಸ್ಮಸ್ ಸ್ನೇಹಕೂಟ

 ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ವತಿಯಿಂದ ಮಾಧ್ಯಮ ಮಿತ್ರರೊಂದಿಗೆ ಕ್ರಿಸ್ಮಸ್ ಸ್ನೇಹಕೂಟ

 


ಬೆಳ್ತಂಗಡಿ ಧರ್ಮಪ್ರಾಂತ್ಯದ ಸಮಾಜ ಸೇವಾ ವಿಭಾಗವಾದ ಡಿ.ಕೆ.ಆರ್.ಡಿ.ಎಸ್ ನೇತೃತ್ವದಲ್ಲಿ ಮಾಧ್ಯಮ ಮಿತ್ರರೊಂದಿಗೆ ಕ್ರಿಸ್ಮಸ್ ಸ್ನೇಹ ಕೂಟವು ದಿನಾಂಕ 20 ಡಿಸೆಂಬರ್ ರಂದು ಸಾಂತೋಮ್ ಟವರ್ ನಲ್ಲಿ ನಡೆಯಿತು.


ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂದನೀಯ ಫಾ. ಬಿನೋಯಿ ಎ.ಜೆ. ರವರು ಪ್ರಾಸ್ತಾವಿಕ ಮಾತನಾಡಿ ಮಾಧ್ಯಮ ಮಿತ್ರರು ಸಂಸ್ಥೆಯ ಕಾರ್ಯಕ್ರಮಕ್ಕೆ ನೀಡುವ ಸಹಕಾರಕ್ಕೆ ಸ್ಮರಿಸಿದರು.

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ಚೈತ್ರೇಶ್ ಇಳಂತಿಲ ಮುಖ್ಯ ಅಭ್ಯಾಗತರಾಗಿ ಆಗಮಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.


ಇನ್ನೊರ್ವ ಮುಖ್ಯ ಅತಿಥಿ ಮೀಡಿಯಾ ಕ್ಲಬ್ ಅಧ್ಯಕ್ಷರಾದ ಬಾಲಕೃಷ್ಣರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಬೆಳ್ತಂಗಡಿ ಧರ್ಮಪ್ರಾಂತ್ಯದ ಮೀಡಿಯಾ ಅಪೋಸ್ತಲೇಟ್ ನಿರ್ದೇಶಕರಾದ ವಂದನೀಯ ಫಾ. ಮ್ಯಾಥ್ಯೂ ತಾಯೇಕ್ಕಾಟ್ಟೀಲ್ ಕ್ರಿಸ್ಮಸ್ ಕೇಕ್ ಕತ್ತರಿಸಿ, ಕ್ರಿಸ್ಮಸ್ ಹಬ್ಬದ ಸಂದೇಶ ನೀಡಿದರು.
ಹಾಜರಿದ್ದ ಪತ್ರಿಕೆ ಹಾಗೂ ಮೀಡಿಯಾ ಕ್ಲಬ್ಬಿನ ಸದಸ್ಯರಿಗೆ ಕಿರು ಕಾಣಿಕೆ ನೀಡಲಾಯಿತು. ಸಂಯೋಜಕಿ ಕು. ಶ್ರೇಯಾ ಪ್ರಾರ್ಥನೆ ಹಾಡಿದರು.


ಸಂಸ್ಥೆಯ ಕಾರ್ಯಕರ್ತರಾದ ಮಾರ್ಕ್ ಡಿ’ಸೋಜರವರು ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಸಂಯೋಜಕರಾದ ಸುನಿಲ್ ಗೊನ್ಸಾಲ್ವಿಸ್ ಎಲ್ಲರನ್ನು ಸ್ವಾಗತಿಸಿ, ಶ್ರೀಮತಿ ಜಿನಿ ಪಿ.ಜೆ. ಧನ್ಯವಾದವಿತ್ತರು.

Related post

Leave a Reply

Your email address will not be published. Required fields are marked *

error: Content is protected !!