• February 9, 2025

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಂಡ ಸಿದ್ಧಿಶ್ರೀ ಸಭಾಭವನಕ್ಕೆ ಸಹಾಯಧನ ಚೆಕ್ ಹಸ್ತಾಂತರ

 ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಂಡ ಸಿದ್ಧಿಶ್ರೀ ಸಭಾಭವನಕ್ಕೆ ಸಹಾಯಧನ ಚೆಕ್ ಹಸ್ತಾಂತರ

 

ಬಂದಾರು :ಬಂದಾರು ಗ್ರಾಮ ಪೆರ್ಲ ಬೈಪಾಡಿಯ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಯಶಸ್ಸಿಗೆ ಕಾರಣಿಕರ್ತರಾದ ಸಮಸ್ತರಿಗೆ ಅಭಿನಂದನಾ ಸಭೆ ಸಿದ್ಧಿಶ್ರೀ ಕಲಾವೇದಿಕೆಯಲ್ಲಿ ಜ 26 ರಂದು ನಡೆಯಿತು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇದರ ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಡಿಯಲ್ಲಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಂಡ ಸಿದ್ಧಿಶ್ರೀ ಸಭಾಭವನಕ್ಕೆ ಶ್ರೀ ಕ್ಷೇತ್ರದಿಂದ ರೂ 2.00 ಲಕ್ಷ ಸಹಾಯಧನ ಚೆಕ್ ಬೆಳ್ತಂಗಡಿ ತಾಲ್ಲೂಕಿನ ಯೋಜನಾಧಿಕಾರಿ ಸುರೇಂದ್ರ ಕುಮಾರ್ ರವರು ಬ್ರಹ್ಮಕಲಶೋತ್ಸವ ಸಮಿತಿಗೆ ಹಸ್ತಾಂತರ ಮಾಡಿದರು. ಈ ಸಂದರ್ಭದಲ್ಲಿ ಉಜಿರೆ ವಲಯದ ಮೇಲ್ವಿಚಾರಕಿ ವನಿತಾ, ಬೈಪಾಡಿ ಕಾರ್ಯಕ್ಷೇತ್ರದ ಸೇವಾಪ್ರತಿನಿದಿ ಪ್ರಮೀಳಾ, ಒಕ್ಕೂಟದ ಪದಾಧಿಕಾರಿಗಳಾದ ದಿನೇಶ್ ಅಡ್ಡಾರು, ಅನಿತಾ ಕುರುಡಂಗೆ ಉಪಸ್ಥಿತರಿದ್ದರು.


ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಮಹಾಬಲ ಗೌಡ ನಾಗಂದೋಡಿ, ಶ್ರೀ ಕ್ಷೇತ್ರ ಧರ್ಮಸ್ಥಳದ ಕೃಷಿ ವಿಭಾಗದ ಮುಖ್ಯಸ್ಥರಾದ ಬಾಲಕೃಷ್ಣ ಪೂಜಾರಿ ಬಜಗುತ್ತು, ಆಡಳಿತ ಮಂಡಳಿಯ ಅಧ್ಯಕ್ಷರಾದ ರಮೇಶ ಗೌಡ ಅಡ್ಡಾರು, ಅನುವಂಶೀಯ ಆಡಳಿತ ಮೊಕ್ತೇಸರರಾದ ಕುಕ್ಕಪ್ಪ ಗೌಡ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಪರಪ್ಪಾಜೆ, ಕೋಶಾಧಿಕಾರಿ ಕೇಶವ ಗೌಡ ಕೊಂಗುಜೆ, ದೇವಳದ ಅರ್ಚಕರಾದ ಅನಂತರಾಮ ಶಬರಾಯ, ಭಜನಾ ಮಂಡಳಿ ಅಧ್ಯಕ್ಷರಾದ ಲಕ್ಷ್ಮಣ ಗೌಡ ಫಲಸದಕೋಡಿ, ಮಹಿಳಾ ಸಮಿತಿ ಅಧ್ಯಕ್ಷರಾದ ಶ್ವೇತಾ ಹಾರ್ತ್ಯಾರು ವೇದಿಕೆಯಲ್ಲಿ ಉಪಸ್ಥಿರಿದ್ದರು.

Related post

Leave a Reply

Your email address will not be published. Required fields are marked *

error: Content is protected !!