ಸಂಪೂರ್ಣ ಶಿಲಾಮಯವಾಗಿ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಪ್ರಯುಕ್ತ ನವದುರ್ಗಾ ಲೇಖನ ಯಜ್ಞ

ಸಂಪೂರ್ಣ ಶಿಲಾಮಯವಾಗಿ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಪ್ರಯುಕ್ತ ನವದುರ್ಗಾ ಲೇಖನ ಯಜ್ಞ ಆಯೋಜಿಸಲಾಗಿದ್ದು ಈ ಲೇಖನವನ್ನು ಬರೆಯುವ ಕಾರ್ಯಕ್ರಮವು ಯಶಸ್ವಿಯಾಗಿದ್ದು ಈ ಪ್ರಯುಕ್ತ ಈ ದಿನ ಫೆ. 4 ರಂದು ನವಚಂಡೀಯಾಗ ಹಮ್ಮಿಕೊಂಡಿದ್ದು ಭಕ್ತಿಪೂರ್ವಕವಾಗಿ ದೇವಸ್ಥಾನದ ಪ್ರಧಾನ ತಂತ್ರಿಗಳಾದ ಕುಮಾರಗುರು ತಂತ್ರಿ ಹಾಗೂ ಶ್ರೀನಿವಾಸ ತಂತ್ರಿಗಳ ಸಮ್ಮುಖದಲ್ಲಿ ಅದ್ದೂರಿಯಾಗಿ ನಡೆಯಿತು.
ಈ ದಿನ ಪರಮಪೂಜ್ಯ ಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಪೇಜಾವರ ಅಧೋಕ್ಷಜ ಮಠ ಉಡುಪಿ ಸ್ವಾಮೀಜಿಯವರು ಹಾಗೂ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಶ್ರೀಧಾಮ ಮಣಿಲಾ ಬಂಟ್ವಾಳ ಇವರು ಧಾರ್ಮಿಕ ಸಭಾಕಾರ್ಯಕ್ರಮದಲ್ಲಿ ಆಶೀರ್ವಚಿಸಿ ದೀಪ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ನವದುರ್ಗಾ ಲೇಖನ ಯಜ್ಞ ಸಮಿತಿ ಅಧ್ಯಕ್ಷರು ಉಡುಪಿ ನಿಕಟಪೂರ್ವ ಶಾಸಕರಾದ ಕೆ.ರಘುಪತಿ ಭಟ್ ಅವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಗುರ್ಮೆ ಸುರೇಶ್ ಶೆಟ್ಟಿ ಶಾಸಕರು ಕಾಪು ವಿಧಾನಸಭಾ ಕ್ಷೇತ್ರ ಅವರು ಸಭಾಧ್ಯಕ್ಷತೆ ವಹಿಸಿಕೊಂಡರು ,ಮುಖ್ಯ ಅತಿಥಿಗಳಾಗಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರು ಎಂ ಆರ್ ಜಿ ಗ್ರೂಪ್ ಮಾಲೀಕರಾದ ಬಂಜಾರ ಪ್ರಕಾಶ್ ಶೆಟ್ಟಿ,ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ವಾಸುದೇವ್ ಶೆಟ್ಟಿ,ಡಾ ಎಂ ಎನ್ ರಾಜೇಂದ್ರ ಕುಮಾರ್ ಅಧ್ಯಕ್ಷರು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್(ನಿ)ಮಂಗಳೂರು ಅಧ್ಯಕ್ಷರು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಲ(ನಿ)ಬೆಂಗಳೂರು,ಡಾ ಮಂಜುನಾಥ್ ಭಂಡಾರಿ ಶಾಸಕರು ವಿಧಾನ ಪರಿಷತ್ ಕರ್ನಾಟಕ,ಲಾಲಾಜಿ ಆರ್ ಮೆಂಡನ್ ಮಾಜಿ ಶಾಸಕರು ಕಾಪು ವಿಧಾನಸಭಾಕ್ಷೇತ್ರ ,ಹಾಗೂ ನವದುರ್ಗಾ ಲೇಖನ ಯಜ್ಞ ಸಮಿತಿಯ ಪದಾಧಿಕಾರಿವಳು ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ಬ್ರಹ್ಮಕಲಶೋತ್ಸವ ಸಮಿತಿಯ ಪದಾಧಿಕಾರಿಗಳು ಮತ್ತು ಪ್ರಮುಖರು ದೇವಾಲಯದ ಸಿಬ್ಬಂದಿಗಳು ಮಹಾದಾನಿಗಳ ಸಾವಿರಾರು ಭಕ್ತಾಭಿಮಾನಿಗಳು ಭಾಗಿಯಾದರು.