ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ರಾಜ್ಯಪಾಲರಿಂದ ರಾಜ್ಯ ಪ್ರಶಸ್ತಿ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿ ಯ ” ಶ್ರೀ ಮಂಜುನಾಥ ದಳದ “ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಸ್ಕೌಟ್ಸ್ ವಿದ್ಯಾರ್ಥಿಗಳಾದ ಜೈದೀಪ್ ಗೌಡ ಹಾಗೂ ರಕ್ಷಣ್ ಶೆಟ್ಟಿ ಇವರು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆ ಆಯೋಜಿಸಿದ ರಾಜ್ಯ ಪುರಸ್ಕಾರ ಪರೀಕ್ಷೆಯಲ್ಲಿ ತೇರ್ಗಡೆಗೊಂಡು ರಾಜ್ಯದ ರಾಜ್ಯಪಾಲರಿಂದ ಬೆಂಗಳೂರಿನ ಗಾಜಿನ ಮನೆಯಲ್ಲಿ ಪ್ರಶಸ್ತಿ ಪತ್ರವನ್ನು ಸ್ವೀಕರಿಸಲಿದ್ದಾರೆ. ಇವರಿಗೆ ಮುಖ್ಯ ಶಿಕ್ಷಕರಾದ ಶ್ರೀಮತಿ ಹೇಮಲತಾ ಎಂ ಆರ್ ರವರ ಸಲಹೆಯೊಂದಿಗೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಕೌಟ್ ಮಾಸ್ಟರ್ ನಿವೃತ್ತ ಶಿಕ್ಷಕ ದತ್ತಾತ್ರೇಯಗೊಲ್ಲ ಇವರ ಮಾರ್ಗದರ್ಶನದಲ್ಲಿ , , ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ, ಸ್ಥಳೀಯ ಸಂಸ್ಥೆ ಬೆ ಳ್ತಂಗಡಿಯ ಕಾರ್ಯದರ್ಶಿ ಪ್ರಮೀಳ ತರಬೇತಿಯನ್ನು ನೀಡುತ್ತಿದ್ದಾರೆ.