• March 24, 2025

ವಿದ್ಯಾವಂತರು- ವಿಚಾರವಂತರಾಗಬೇಕು- ವಿಚಾರವಂತರು-ಆಚಾರವಂತರಾಗಬೇಕುಶ್ರೀ ಡಿ. ಹರ್ಷೇಂದ್ರ ಕುಮಾರ್‌

 ವಿದ್ಯಾವಂತರು- ವಿಚಾರವಂತರಾಗಬೇಕು- ವಿಚಾರವಂತರು-ಆಚಾರವಂತರಾಗಬೇಕುಶ್ರೀ ಡಿ. ಹರ್ಷೇಂದ್ರ ಕುಮಾರ್‌

 


ಉಜಿರೆ : ಕಲಿಕೆ ಚೆನ್ನಾಗಿದ್ದರೆ ಗಳಿಕೆಯೂ ಚೆನ್ನಾಗಿರುತ್ತದೆ. ಕಲಿಕೆಯ ಸಂದರ್ಭದಲ್ಲಿ ಹೆತ್ತವರ ಶ್ರಮ, ಗಳಿಕೆಯ ಸಂದರ್ಭ ನಿಮ್ಮ ಪರಿಶ್ರಮ ನಿಮ್ಮ ಜೀವನವನ್ನು ರೂಪಿಸುವಲ್ಲಿ ಸಹಕಾರಿಯಾಗುತ್ತದೆ. ಈ ರುಡ್‌ ಸೆಟ್‌ ಸಂಸ್ಥೆಯಲ್ಲಿ ಕಲಿತ ತರಬೇತಿಗಳು ನಿಮ್ಮ ಬದುಕಿಗೆ ದಾರಿ ದೀಪವಾಗಲಿ, ವೃತಿಯಲ್ಲಿ ಯಾವುದೇ ಕಾರಣಕ್ಕೂ ಅಡಗಿಸಿಕೊಳ್ಳಬೇಡಿ, ಹೆಚ್ಚು ತೊಡಗಿಸಿಕೊಳ್ಳಿ. ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಈ ಸಂಸ್ಥೆಯನ್ನು ಸ್ಥಾಪಿಸುವುದರ ಮೂಲಕ ಆನೇಕ ಯುವಕ-ಯುವತಿಯರು ಸ್ವಂತ ಉದ್ಯೋಗ ಮೂಲಕ ತನ್ನ ಬದುಕನ್ನು ಕಟ್ಟಿಕೊಳ್ಳಲು ಸಹಾಯಕವಾಗಿದೆ ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಶ್ರೀ ಡಿ. ಹರ್ಷೇಂದ್ರ ಕುಮಾರ್‌ ಅಭಿಪ್ರಾಯಪಟ್ಟರು.
ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ 30 ದಿನಗಳ ಕಾಲ ನಡೆದೆ * ಟಿ.ವಿ. ಟೆಕ್ನಿಷಿಯನ್‌ ತರಬೇತಿ ಮತ್ತು 13 ದಿನಗಳ ಕಾಲ ನಡೆದೆ *ಸಿ.ಸಿ. ಟಿವಿ ಕ್ಯಾಮರ * ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಪ್ರಮಾಣ ಪತ್ರ ವಿತ್ತರಿಸಿ ಮಾತನಾಡಿದರು. ಮೌಲ್ಯ ಮತ್ತು ಕೌಶಲ್ಯವನ್ನು ಸದ್ಬಳಕೆ ಮಾಡಿಕೊಳ್ಳಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರುಡ್ ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರಾದ ಶ್ರೀ ಬಿ.ಪಿ.ವಿಜಯ ಕುಮಾರ್ ವಹಿಸಿ, ಮಾತನಾಡಿ ಸ್ವ ಉದ್ಯೋಗಕ್ಕೆ ಬೇಕಾದ ಸಾಲ ಸೌಲಭ್ಯಗಳಿಗೆ ಯೋಜನಾ ವರದಿಯನ್ನು ತಯಾರಿಸಿಕೊಂಡು ಬ್ಯಾಂಕಗಳನ್ನು ಸಂಪರ್ಕ ಮಾಡಿ ಎಂದು ತಿಳಿಸಿದರು.

ರುಡ್ ಸೆಟ್ ಸಂಸ್ಥೆಯ ನಿರ್ದೇಶಕರಾದ ಶ್ರೀ ಅಜೇಯ ಅವರು ಅತಿಥಿಗಳನ್ನು ಸ್ವಾಗತಿಸಿ, ತರಬೇತಿಯ ಹಿನ್ನೋಟ ನೀಡಿದರು. ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್ ಕಾರ್ಯಕ್ರಮ ನಿರೂಪಿಸಿದರು ಉಪನ್ಯಾಸಕರಾದ ಕೆ.ಕರುಣಾಕರ ಜೈನ್ ವಂದಿಸಿದರು. ಸುಮಾರು 64 ಜನ ಶಿಬಿರಾರ್ಥಿಗಳ ಭಾಗವಹಿಸಿದ್ದರು, ಕುಮಾರಿ ಕೀರ್ತನಾ ಮತ್ತು ಕುಮಾರಿ ಪ್ರತಿಷ್ಟಾ ಪ್ರಾರ್ಥನೆ ಮಾಡಿದರು, ಮಹ್ಮಮದ್ ಫಯಾಜ್‌, ಅಶೋಕ, ಆನಂದ‌, ಕುಮಾರಿ ನಿಸರ್ಗ ತರಬೇತಿಯ ಅನುಭವ ಹಂಚಿಕೊಂಡರು.

Related post

Leave a Reply

Your email address will not be published. Required fields are marked *

error: Content is protected !!