• March 24, 2025

ನಕ್ಸಲರಿಗೆ ಶರಣಾದ ಸರ್ಕಾರ ಅಭಿವೃದ್ಧಿಯ ಕನಸು ಹುಸಿಯಾಗಿಸಿದ ಬಜೆಟ್: ಶಾಸಕ ಹರೀಶ್ ಪೂಂಜ

 ನಕ್ಸಲರಿಗೆ ಶರಣಾದ ಸರ್ಕಾರ ಅಭಿವೃದ್ಧಿಯ ಕನಸು ಹುಸಿಯಾಗಿಸಿದ ಬಜೆಟ್: ಶಾಸಕ ಹರೀಶ್ ಪೂಂಜ

 

ಬೆಳ್ತಂಗಡಿ : ಮಾರ್ಚ್ 7: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಇಂದು ಮಂಡಿಸಿದ 2025- 26ರ ಸಾಲಿನ ಮುಂಗಡ ಪತ್ರ ನಕ್ಸಲರಿಗೆ ಶರಣಾಗಿ ಶ್ರೀಸಾಮಾನ್ಯರ ಪಾಲಿಗೆ ಸಂಪೂರ್ಣ ನಿರಾಶದಾಯಕವಾಗಿದೆಯೆಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಬೇಸರ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಸರ್ಕಾರಕ್ಕೆ ನಕ್ಸಲ್ ಚಟುವಟಿಕೆ ಬಗ್ಗೆ ಪೂರ್ಣ ಅರಿವಿದ್ದಂತೆ ಕೇವಲ ಆರು ಜನರ ನಕ್ಸಲರ ಶರಣಗಾತಿಯಿಂದ ನಕ್ಸಲ್ ನಿಗ್ರಹ ಪಡೆಯನ್ನೇ ವಿಸರ್ಜಿಸಿ 10 ಕೋಟಿ ವಿಶೇಷ ಪ್ಯಾಕೇಜ್ ನೀಡಿದ್ದನ್ನು ಗಮನಿಸಿದರೆ ನಕ್ಸಲರು ಸರ್ಕಾರಕ್ಕೆ ಶರಣಾಗಿದ್ದರೋ ಅಥವಾ ಸರ್ಕಾರವೇ ನಕ್ಸಲರಿಗೆ ಶರಣಾಯಿತೋ ಎಂಬಂತಿದೆ.

ಯೋಜನಾಬದ್ಧವಲ್ಲದ ಯೋಚನೆಗಳಿಂದ ಕರ್ನಾಟಕ ರಾಜ್ಯದ ವಿತ್ತೀಯ ಶಿಸ್ತು ಹಳಿತಪ್ಪಿ ಮೂಲ ಸೌಕರ್ಯಗಳ ಅಭಿವೃದ್ಧಿ ಕುಂಠಿತದೊಂದಿಗೆ ರಾಜ್ಯದ ಜನತೆ ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸುತ್ತಿದ್ದಾರೆ. ಕಳೆದ ಸಾಲಿನ ಮುಂಗಡ ಪತ್ರದಲ್ಲಿ ವಿವಿಧ ಇಲಾಖೆಗಳಿಗೆ ಘೋಷಿಸಿದ ಅನುದಾನ ಅನುಷ್ಠಾನವಾಗದೆ ದುರುಪಯೋಗವಾಗಿದ್ದು ಈ ಬಾರಿಯೂ ಮುಖ್ಯಮಂತ್ರಿಗಳ ಬಜೆಟ್ ಭಾಷಣದಲ್ಲಿ ಎಂದಿನಂತೆ ಅಲ್ಪ ಸಂಖ್ಯಾತರ ತುಷ್ಟೀಕರಣ, ಮೂಲ ಸೌಕರ್ಯ, ಶಿಕ್ಷಣ, ಆರೋಗ್ಯ, ಇಂಧನ ಕೃಷಿ ಇಲಾಖೆಗಳ ಕಡೆಗಣೆನೆ ಎದ್ದು ಕಾಣುತ್ತಿದೆ. ಒಟ್ಟಾರೆಯಾಗಿ ರಾಜ್ಯದ ಆರ್ಥಿಕ ಪ್ರಗತಿ ಕುಂಠಿತವಾಗುತ್ತಿರುವುದರ ಬಗ್ಗೆ ತೀವ್ರವಾದ ಕಳವಳವನ್ನು ಶಾಸಕ ಹರೀಶ್ ಪೂಂಜ ಪ್ರಕಟಣೆ ಮೂಲಕ ವ್ಯಕ್ತಪಡಿಸಿದ್ದಾರೆ.

Related post

Leave a Reply

Your email address will not be published. Required fields are marked *

error: Content is protected !!