ಮುಂಗಾರು ಪೂರ್ವ ಚಂಡಮಾರುತದ ಪರಿಣಾಮವಾಗಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆ:ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ, ಹವಾಮಾನ ಇಲಾಖೆ ಎಚ್ಚರಿಕೆ

ಏಪ್ರಿಲ್ 11: ರಾಜ್ಯದಲ್ಲೆ ವರುಣಾನ ಅಬ್ಬರ ಜೋರಾಗಿದೆ. ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆಯು ದೇಶದ ಹವಾಮಾನದಲ್ಲಿ ಬದಲಾವಣೆಗೆ ಕಾರಣವಾಗಿದ್ದು, ಬಂಗಾಳಕೊಲ್ಲಿಯ ಮಧ್ಯಭಾಗದಲ್ಲಿ ಚಂಡಮಾರುತದ ಪ್ರಭಾವದಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಭರ್ಜರಿ ಮಳೆಯಾಗುತ್ತಿದೆ. ಈಗಾಗಲೇ ರಾಜ್ಯದಲ್ಲಿ ಕೆಲ ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಜನರು ಎಚ್ಚರಿಯಿಂದ ಇರುವಂತೆ ಭಾರತೀಯ ಹವಾಮಾನ ಇಲಾಖೆಯೂ ಮುನ್ಸೂಚನೆಯನ್ನ ನೀಡಿದೆ.
ಕಳೆದ ವರ್ಷಕ್ಕಿಂತ ಈ ವರ್ಷವೂ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂಗಾರು ಪೂರ್ವ ಚಂಡಮಾರುತದ ಪರಿಣಾಮವಾಗಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಕಳೆದ ಕೆಲವು ದಿನಗಳಿಂದಲೇ ರಾಜ್ಯದಲ್ಲಿ ಹಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ಕಾಣಿಸಿಕೊಂಡದ್ದು, ಇದೀಗ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಮುಂದಿನ ಒಂದು ವಾರದಲ್ಲಿ ರಾಜ್ಯದಾದ್ಯಂತ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಗಾಳಿಯ ವೇಗ ಗಂಟೆಗೆ 30-50 ಕಿಮೀ ತಲುಪುವ ಸಾದ್ಯತೆಯಿದ್ದು, ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದ್ದು, ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.