• July 27, 2024

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಭಾರತ ಸ್ಕೌಟ್ ಗೈಡ್ಸ್ ಅಂತರಾಷ್ಟ್ರೀಯ ಜಾಂಬೂರಿಯ ಬಗ್ಗೆ ಮಾಹಿತಿ ಕಾರ್ಯಗಾರ

 ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಭಾರತ ಸ್ಕೌಟ್ ಗೈಡ್ಸ್ ಅಂತರಾಷ್ಟ್ರೀಯ ಜಾಂಬೂರಿಯ ಬಗ್ಗೆ ಮಾಹಿತಿ ಕಾರ್ಯಗಾರ


ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಡಿಸೆಂಬರ್ 21 ರಿಂದ 27ರವರೆಗೆ ಮೂಡಬಿದಿರೆಯಲ್ಲಿ ನಡೆಯಲಿರುವ ಸ್ಕೌಟ್ಸ್ ಗೈಡ್ಸ್ ನ ವಿಶ್ವ ಸಾಂಸ್ಕೃತಿಕೋತ್ಸವ ಜಾಂಬೂರಿಯ ಉತ್ಸವದಂಗವಾಗಿ ಮಾಹಿತಿ ಕಾರ್ಯಗಾರ ನಡೆಯಿತು.

ಭಾರತ್ ಸ್ಕೌಟ್ಸ್ ಗೈಡ್ಸ್ ಸಂಘಟನಾ ಆಯುಕ್ತರಾದ ಶ್ರೀ ಭರತ್ ರಾಜ್. ಕೆ ಇವರು ಕಾರ್ಯಕ್ರಮದ ಆಗುಹೋಗುಗಳ ಕುರಿತು ಸಮಗ್ರ ಮಾಹಿತಿ ನೀಡಿದರು. ವಿದ್ಯಾರ್ಥಿಗಳ ಜೊತೆಗೆ ಹೆತ್ತವರು ಇದ್ದಿದ್ದು ಈ ಕಾರ್ಯಕ್ರಮದ ವಿಶೇಷವಾಗಿತ್ತು. ತದನಂತರ ವಿದ್ಯಾರ್ಥಿಗಳು ತಮ್ಮ ನೃತ್ಯ ಹಾಡುಗಳ ಮೂಲಕ ಅಭ್ಯಾಗತರನ್ನು ಮನರಂಜಿಸಿದರು.

ಗೈಡ್ ಕ್ಯಾಪ್ಟನ್ ಶ್ರೀಮತಿ ಗೀತಾ ಕಾರ್ಯಕ್ರಮವನ್ನು ನಿರೂಪಿಸಿ ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಪರಿಮಳ ಎಂ.ವಿ ಸ್ವಾಗತಿಸಿ, ಸ್ಕೌಟ್ ಮಾಸ್ಟರ್ ಶ್ರೀಮತಿ ಶಶಿಕಲಾ ವಂದಿಸಿದರು.

Related post

Leave a Reply

Your email address will not be published. Required fields are marked *

error: Content is protected !!