• September 8, 2024

ಕನ್ಯಾಡಿ:ಚಾತುರ್ಮಾಸ್ಯ ವೃತಾಚರಣೆಯಲ್ಲಿ , ನಿಡ್ಲೆ, ಶಿರ್ಲಾಲು ಗ್ರಾಮಸ್ಥರಿಂದ ಭಜನಾ ಕಾರ್ಯಕ್ರಮ: ಮಾಜಿ ಸಚಿವ ರಮಾನಾಥ ರೈ ಭೇಟಿ

 ಕನ್ಯಾಡಿ:ಚಾತುರ್ಮಾಸ್ಯ ವೃತಾಚರಣೆಯಲ್ಲಿ , ನಿಡ್ಲೆ, ಶಿರ್ಲಾಲು ಗ್ರಾಮಸ್ಥರಿಂದ ಭಜನಾ ಕಾರ್ಯಕ್ರಮ: ಮಾಜಿ ಸಚಿವ ರಮಾನಾಥ ರೈ ಭೇಟಿ

ಕನ್ಯಾಡಿ: ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸ್ವಾಮೀಜಿಯವರ 7 ನೇ ದಿನದ ಚಾತುರ್ಮಾಸ್ಯ ವೃತಾಚರಣೆಯಲ್ಲಿ ಶ್ರೀ ರಾಮ ಭಜನಾ ಮಂಡಳಿ ಕಲ್ಕುಡ ಗುಡ್ಡೆ ಬರೆಂಗಾಯ, ನಿಡ್ಲೆ ಮತ್ತು ಶಿರ್ಲಾಲು ಗ್ರಾಮಸ್ಥರಿಂದ ಭಜನಾ ಕಾರ್ಯಕ್ರಮ ಜರುಗಿತು.

ಕಾರ್ಯಕ್ರಮಕ್ಕೆ ಮಾಜಿ ಸಚಿವ ರಮಾನಾಥ ರೈ ಭೇಟಿ ನೀಡಿ ಸ್ವಾಮೀಜಿಗಳ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಪಾಣೆ ಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಮುಖಂಡರಾದ ಪ್ರಕಾಶ್ ಶೆಟ್ಟಿ ತುಂಬೆ,ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪದ್ಮ ಶೇಖರ ಜೈನ್,ಮಾಯಿಲಪ್ಪ ಸಾಲಿಯಾನ್,ಶಿವಪ್ಪ ಪೂಜಾರಿ, ವಾಸು ಪೂಜಾರಿ, ಸಂಪತ್ ಕುಮಾರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Related post

Leave a Reply

Your email address will not be published. Required fields are marked *

error: Content is protected !!