ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಗಾಂಧಿ ಜಯಂತಿ ಆಚರಣೆ


ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಗಾಂಧಿ ಜಯಂತಿ ಆಚರಣೆಯನ್ನು ಅ.2 ರಂದು ಆಚರಿಸಲಾಯಿತು.
ಜ್ಯೋತಿ ಬೆಳಗಿಸಿ ಶಾಸ್ತ್ರೀಯ ವರ ಹಾಗೂ ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವುದರ ಮುಖಾಂತರ ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳ ಎಂ.ವಿ.ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ತದನಂತರ ಸರ್ವಧರ್ಮ ಪ್ರಾರ್ಥನೆ ನಡೆಯಿತು.ಶಾಲಾ ಶಿಕ್ಷಕರು ಭಜನೆಯನ್ನು ವಿದ್ಯಾರ್ಥಿಗಳಿಗೆ ಹೇಳಿಕೊಟ್ಟರು.
ವಿದ್ಯಾರ್ಥಿಗಳು ದೇಶಭಕ್ತಿ ಗೀತೆಯನ್ನು ಹಾಗೂ ಶಾಂತಿ ಸಾಮರಸ್ಯವನ್ನು ಬಿಂಬಿಸುವ ಹಾಡನ್ನು ಹಾಡಿದರು. ಸಹ ಶಿಕ್ಷಕಿಯಾದ ಆಶಾ ಕುಮಾರಿ ವಿದ್ಯಾರ್ಥಿಗಳಿಗೆ ಮಹಾತ್ಮ ಗಾಂಧೀಜಿ ಹಾಗೂ ಶಾಸ್ತ್ರಿಜಿ ಅವರ ತತ್ವ ಹಾಗೂ ವಿಚಾರಧಾರೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ ಹಾಗೂ ಶಾಂತಿ ಸಾಮರಸ್ಯದಿಂದ ಕೂಡಿದ ಸಹಬಾಳ್ವೆಯ ಜೀವನವನ್ನು ಹೊಂದಿ ಉತ್ತಮ ಪ್ರಜೆಗಳಾಗಿ ಬಾಳುವ ಜವಾಬ್ದಾರಿ ವಿದ್ಯಾರ್ಥಿಗಳಾದ ನಿಮ್ಮ ಮೇಲಿದೆ ಎಂದು ನುಡಿದರು.
ಈ ಕಾರ್ಯಕ್ರಮದ ಬಳಿಕ ಸ್ಕೌಟ್ ಹಾಗೂ ಗೈಡ್ಸ್ ವಿದ್ಯಾರ್ಥಿಗಳು ಮತ್ತು ಯೂತ್ ರೆಡ್ ಕ್ರಾಸ್ ನ ವಿದ್ಯಾರ್ಥಿಗಳು ಜೊತೆಗೂಡಿ ಸೇವಾಧಾಮ ಎನ್ನುವ ಸಂಸ್ಥೆಗೆ ಭೇಟಿ ಕೊಟ್ಟು ನೊಂದ ಮನಸ್ಸಿಗೆ ಸಾಂತ್ವನ ತುಂಬಿ ಅವರ ಭಾವನೆಗಳ ಮಿಡಿತಕ್ಕೆ ವಿದ್ಯಾರ್ಥಿಗಳು ಸ್ಪಂದಿಸಿ ಒಂದಷ್ಟು ಹಾಡು ಹರಟೆಯೊಂದಿಗೆ ಅವರನ್ನು ರಂಜಿಸಿ ಮನಸ್ಸಿಗೆ ಮುದ ನೀಡಿದರು.
ಶಾಲಾ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಈ ಕಾರ್ಯಕ್ರಮದ ಸಾಕ್ಷಿಗಳಾದರು.