ವೃಷ್ಟಿ ಕನ್ನಡ ಚಲನಚಿತ್ರ ಪೋಸ್ಟರ್ ಬಿಡುಗಡೆ
ಮಂಗಳೂರು: ವಾಗ್ಮಿ ಸಿನಿ ಕ್ರಿಯೇಷನ್ಸ್ ಅರ್ಪಿಸುವ ಸಾಧನಾ ಜಗದೀಶ್ ಶೆಟ್ಟಿ ಯವರ ನಿರ್ಮಾಣದ ಹೊಸ ಕನ್ನಡ ಚಲನಚಿತ್ರದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮವು ಅ.5 ರಂದು ಮಂಗಳೂರಿನ ಪ್ರಕಾಶ್ ನಾಥ ಮಂದಿರದಲ್ಲಿ ನಡೆಯಿತು.
ಪ್ರಕಾಶ್ ನಾಥ ಮಂದಿರದ ಸುಮಂತ್ ರವರು ಪೋಸ್ಟರ್ ನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ಧಾರ್ಮಿಕ ಮುಖಂಡ ನಾಗರಾಜ್ ಆಚಾರ್ಯ ಉಪಸ್ಥಿತರಿದ್ದರು. ಈ ಮೊದಲು ಕನಸು ಮಾರಾಟಕ್ಕಿದೆ ಚಲನಚಿತ್ರ ಹಾಗೂ ವನಜಾ ವೆಬ್ ಸೀರಿಸ್, ಮಾಡಿದ ತಂಡವೇ ಈ ವೃಷ್ಟಿ ಚಲನಚಿತ್ರವನ್ನು ಚಿತ್ರೀಕರಿಸಿದ್ದು ನಿಶಿತ್ ಶೆಟ್ಟಿಯವರು ನಿರ್ದೇಶನ ಮಾಡಿದ್ದಾರೆ, ಸಂತೋಷ್ ಆಚಾರ್ಯ ಗುಂಪಲಾಜೆ ಕ್ಯಾಮರ ಕೈಚಳಕ ಈ ಚಿತ್ರದಲ್ಲಿದೆ.ಗಣೇಶ್ ನೀರ್ಚಾಲ್ ಸಂಕಲನ ಮಾಡಿದ್ದು,ಸಂಗೀತ ನಿರ್ದೇಶನವನ್ನು ಮಾನಸ ಹೊಳ್ಳರವರು ನಿರ್ವಹಿಸಿದ್ದಾರೆ.ಮುಖ್ಯ ಭೂಮಿಕೆಯಲ್ಲಿ ಯಶವಂತ್ ಬೆಳ್ತಂಗಡಿ,ಸಿಂಚನಾ ಪಿ.ರಾವ್,ವಿನಿಶಾ,ಕಾಮಿಡಿ ಕಿಲಾಡಿ ಖ್ಯಾತಿಯ ಪ್ರವೀಣ್ ಜೈನ್, ಯುವ ಶೆಟ್ಟಿ,ರಾಕೇಶ್ ಪೂಜಾರಿ,ಅನೀಶ್ ಪೂಜಾರಿ,ಮುಂತಾದವರು ಅಭಿನಯಿಸಿದ್ದಾರೆ.