ಜು.23 ರಂದು ಮುಳಿಯ ಜ್ಯುವೆಲ್ಸ್ ಬೆಳ್ತಂಗಡಿ ವತಿಯಿಂದ ಆಟಿಡೊಂಜಿ ದಿನ- ಗ್ರಾಹಕರ ಸಮಾಗಮ
ಬೆಳ್ತಂಗಡಿ: ಪ್ರಸಿದ್ಧ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ಬೆಳ್ತಂಗಡಿ ಶಾಖೆಯ ವತಿಯಿಂದ ಗ್ರಾಹಕರ ಸಮಾಗಮ ಮತ್ತು ಆಟಿಡೊಂಜಿ ದಿನ ಕಾರ್ಯಕ್ರಮ ಜುಲೈ 23ರಂದು ಸಂಜೆ 6ರಿಂದ 8:30ರ ವರೆಗೆ ನಡೆಯಲಿದೆ.
ಕಾರ್ಯಕ್ರಮದಲ್ಲಿ ಬೆಳ್ತಂಗಡಿ ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಯದುಪತಿ ಗೌಡ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷರು ಸುಭಾಷಿಣಿ, ಬೆಳ್ತಂಗಡಿ ಪತ್ರಕರ್ತರ ಸಂಘದ ಅಧ್ಯಕ್ಷ ಗಣೇಶ್ ಶಿರ್ಲಾಲು ಭಾಗಿಯಾಗಲಿದ್ದಾರೆ.
ಆಟಿಯಲ್ಲಿ ತಯಾರಿಸುವ ತುಳುನಾಡಿನ ಸಸ್ಯಾಹಾರಿ ಖಾದ್ಯಗಳ ಸ್ಪರ್ಧೆ ಹಾಗೂ ಪ್ರದರ್ಶನ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಈ ಸಂದರ್ಭದಲ್ಲಿ ನಡೆಯಲಿವೆ.
ಆಕರ್ಷಕ ಉಡುಗೊರೆಗಳನ್ನು ಗೆಲ್ಲುವ ಅವಕಾಶವನ್ನು ಪಡೆಯಬಹುದು.
ಸ್ಪರ್ಧೆಯ ಕುರಿತ ಹೆಚ್ಚಿನ ಮಾಹಿತಿ ಮತ್ತು ನೋಂದಾವಣೆಗಾಗಿ 9343004916 ಅಥವಾ ಟೋಲ್ ಫ್ರೀ ಸಂಖ್ಯೆ 1800 4252 916 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.