ದೆಹಲಿಗೆ ತಲುಪಿದ ಡಾ| ಡಿ ವೀರೇಂದ್ರ ಹೆಗ್ಗಡೆಯವರಿಗೆ ದೆಹಲಿಯ ವಿಮಾನ ನಿಲ್ದಾಣದಲ್ಲಿ ಸ್ವಾಗತ
ದೆಹಲಿ: ರಾಜ್ಯ ಸಭೆಯ ನಾಮ ನಿರ್ದೇಶಿತ ಸದಸ್ಯರಾಗಿ ಆಯ್ಕೆಯಾದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪರಮಪೂಜ್ಯ ಡಾ| ಡಿ ವೀರೇಂದ್ರ ಹೆಗ್ಗಡೆಯವರು ನಾಳೆ ಪ್ರಮಾಣ ವಚನ ಸ್ವೀಕರಿಸಲು ಇಂದು ದೆಹಲಿಗೆ ತೆರಳಿದ್ದು, ದೆಹಲಿಗೆ ರಾತ್ರಿ 9 ಗಂಟೆಗೆ ತಲುಪುತ್ತಿದ್ದಂತೆ ವಿಮಾನ ನಿಲ್ದಾಣದಲ್ಲಿ ಅವರನ್ನು ಸ್ವಾಗತಿಸಲಾಯಿತು.
ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಬಿಜೆಪಿ ಬೆಳ್ತಂಗಡಿ ಮಂಡಲದ ಅಧ್ಯಕ್ಷ ಜಯಂತ್ ಕೋಟ್ಯಾನ್,ಮಂಡಲದ ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ನಾವೂರ್, ಶ್ರೀನಿವಾಸ ರಾವ್ ಧರ್ಮಸ್ಥಳ ಅವರು ಜೊತೆಗಿದ್ದರು.
ಹೆಗ್ಗಡೆಯವರು ನಾಳೆ ಬೆಳಗ್ಗೆ 11 ಗಂಟೆ ಸುಮಾರಿಗೆ ದೆಹಲಿಯ ಸಂಸತ್ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.